ಬೆಳಗಾವಿ: ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಕಾರ್ಯಾಧ್ಯಕ್ಷ ಚೂನಪ್ಪ ಪೂಜಾರಿ ಪ್ರಯಾಣಿಸುತ್ತಿದ್ದ ಕಾರ್ ಅಪಘಾತಕ್ಕೀಡಾಗಿದೆ.
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿ ಸಮೀಪ ಅಪಘಾತ ಸಂಭವಿಸಿದೆ. ಪ್ರಾಣಾಪಾಯದಿಂದ ಚೂನಪ್ಪ ಪೂಜಾರಿ ಮತ್ತು ರೈತ ಮುಖಂಡರು ಪಾರಾಗಿದ್ದಾರೆ. ರೈತ ಮುಖಂಡರನ್ನು ಭೇಟಿಯಾಗಿ ಬರುವಾಗ ಅಪಘಾತ ಸಂಭವಿಸಿದೆ.
ಡಿಸೆಂಬರ್ 11ರಂದು ಬೆಳಗಾವಿಯ ಸುವರ್ಣಸೌಧದಲ್ಲಿ ರೈತ ಹೋರಾಟ ಹಮ್ಮಿಕೊಳ್ಳಲಾಗಿದೆ. ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ಕೈಗೊಳ್ಳಲಾಗಿದ್ದು, ರೈತ ಹೋರಾಟಕ್ಕೆ ಆಹ್ವಾನಿಸಲು ಕಾರ್ ನಲ್ಲಿ ತೆರಳಿ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ಆಕ್ಸೆಲ್ ಕಟ್ ಆಗಿ ರಸ್ತೆ ಪಕ್ಕದ ಮರಕ್ಕೆ ಕಾರ್ ಡಿಕ್ಕಿಯಾಗಿದೆ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
