HomeLatest NewsBREAKING: ತಡರಾತ್ರಿ ಬೆಂಗಳೂರಲ್ಲಿ ಭೀಕರ ಅಪಘಾತ: ಬೈಕ್ ಗಳಿಗೆ ಆಂಬುಲೆನ್ಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

BREAKING: ತಡರಾತ್ರಿ ಬೆಂಗಳೂರಲ್ಲಿ ಭೀಕರ ಅಪಘಾತ: ಬೈಕ್ ಗಳಿಗೆ ಆಂಬುಲೆನ್ಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

ಬೆಂಗಳೂರು: ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣ ಬಳಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಸಿಗ್ನಲ್ ನಲ್ಲಿ ಎರಡು ಬೈಕ್ ಗಳಿಗೆ ಆಂಬುಲೆನ್ಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಆಂಬುಲೆನ್ಸ್ ಚಾಲಕನ ನಿರ್ಲಕ್ಷಕ್ಕೆ ಇಬ್ಬರು ಬಲಿಯಾಗಿದ್ದಾರೆ. ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣ ಬಳಿ ವೇಗವಾಗಿ ಬಂದು ಎರಡು ಬೈಕ್ ಗಳಿಗೆ ಆಂಬುಲೆನ್ಸ್ ಹೊಡೆದಿದೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಯಾವುದೇ ರೋಗಿಗಳು ಇಲ್ಲದಿದ್ದರೂ ರಿಚ್ಮಂಡ್ ಸರ್ಕಲ್ ಕಡೆಯಿಂದ ಅತಿ ವೇಗವಾಗಿ ಬಂದ ಆಂಬುಲೆನ್ಸ್ ಡಿಕ್ಕಿ ಹೊಡೆದು ಬೈಕ್ ಅನ್ನು 50 ಮೀಟರ್ ದೂರ ಎಳೆದೊಯ್ದಿದೆ. ಅಪಘಾತದ ಬಳಿಕ ಆಂಬುಲೆನ್ಸ್ ಚಾಲಕ ಪರಾರಿಯಾಗಿದ್ದಾನೆ. ಬೈಕುಗಳಿಗೆ ಅಂಬುಲೆನ್ಸ್ ಡಿಕ್ಕಿ ಹೊಡೆದ ನಂತರ ಪೊಲೀಸ್ ಚೌಕಿಗೆ ಡಿಕ್ಕಿ ಹೊಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಸ್ಮಾಯಿಲ್(40), ಸಮೀನಾಬಾನು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳು ಸಿದ್ದಿಖಿ ಸೇರಿ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಳಿಕ ಆಕ್ರೋಶಗೊಂಡ ಜನ ಆಂಬುಲೆನ್ಸ್ ದೂಡಿ ಪಲ್ಟಿ ಹೊಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular