ಚೆನ್ನೈ: ತಮಿಳುನಾಡಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಆಂಧ್ರಪ್ರದೇಶದ ಐವರು ಸಾವನ್ನಪ್ಪಿದ್ದಾರೆ. ರಾಮನಾಥಪುರಂ ಸಮೀಪ ಎರಡು ಕಾರ್ ಗಳ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
ಆಂಧ್ರಪ್ರದೇಶ ಮೂಲದ ಐವರು ಅಯ್ಯಪ್ಪ ಸ್ವಾಮಿ ಭಕ್ತರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಮೇಶ್ವರಂ ದೇವಾಲಯದ ದರ್ಶನಕ್ಕೆ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ.
