HomeKarnatakaBREAKING: ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

BREAKING: ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ರಾಮನಗರ: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿದ್ದ ಸೈನ್ ಬೋರ್ಡ್ ಗೆ ಕೇರಳ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬಸ್ ಪಲ್ಟಿಯಾಗಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಾಮನಗರ ತಾಲೂಕಿನ ಆವರಗೆರೆ ಗೇಟ್ ಬಳಿ ಘಟನೆ ನಡೆದಿದೆ. ಅಪಘಾತದಲ್ಲಿ ಬಸ್ ನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೇರಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೇರಳ ಸಾರಿಗೆ ಬಸ್ ಅಪಘಾತಕ್ಕೀಡಾಗಿದೆ. ಅಪಘಾತದಿಂದ ಕೆಲಕಾಲ ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸಂಚಾರಕ್ಕೆ ಅಡಚಣೆಯಾಗಿತ್ತು, ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular