ಬೆಂಗಳೂರಿನಲ್ಲಿ : ರಾಜಧಾನಿ ಬೆಂಗಳೂರಿನಲ್ಲಿ ತಂದೆಯೇ ಗುಂಡು ಹಾರಿಸಿ ಮಗನನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯ ಕರೆಕಲ್ ಮನೆಯಲ್ಲಿ ಘಟನೆ ನಡೆದಿದೆ. 26 ವರ್ಷದ ನರ್ತನ್ ಭೋಪಣ್ಣನನ್ನು ತಂದೆ ಸುರೇಶ್ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.
ನಿನ್ನೆ ಸಂಜೆ ಸುರೇಶ್ ಮಗ ನರ್ತನ್ ಗೆ ಗುಂಡು ಹಾರಿಸಿದ್ದಾರೆ. ಸ್ಥಳೀಯರ ಮಾಹಿತಿ ಆಧರಿಸಿ ಸ್ಥಳಕ್ಕೆ ಬಂದ ಪೊಲೀಸರು ಕೂಡಲೇ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ನರ್ತನ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ನರ್ತನ್ ಮೃತಪಟ್ಟಿದ್ದಾನೆ. ಸದ್ಯ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.