BREAKING: ಡೊನಾಲ್ಡ್ ಟ್ರಂಪ್ ಹತ್ಯೆ ಪ್ರಯತ್ನದಲ್ಲಿ ಭಾಗಿಯಾದ ಆರೋಪಿ ಗುರುತಿಸಿದ FBI

ವಾಷಿಂಗ್ಟನ್: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆ ಯತ್ನದಲ್ಲಿ 20 ವರ್ಷದ ಥಾಮಸ್ ಮ್ಯಾಥ್ಯೂ ಕ್ರೂಕ್ಸ್ ಭಾಗಿಯಾಗಿದ್ದಾನೆ ಎಂದು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್(ಎಫ್‌ಬಿಐ) ಭಾನುವಾರ ಹೇಳಿಕೆಯಲ್ಲಿ ತಿಳಿಸಿದೆ.

ಶೂಟರ್ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ ರ್ಯಾಲಿಯಲ್ಲಿ ಭಾಗವಹಿಸಿದವರೊಬ್ಬರು ಸಾವನ್ನಪ್ಪಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ. ಘಟನೆಯನ್ನು ಹತ್ಯೆ ಯತ್ನ ಎಂದು ತನಿಖೆ ನಡೆಸಲಾಗುತ್ತಿದೆ ಎಂದು ಸೀಕ್ರೆಟ್ ಸರ್ವಿಸ್ ತಿಳಿಸಿದೆ.

ಶಂಕಿತ ಶೂಟರ್ ಅನ್ನು ತಾತ್ಕಾಲಿಕವಾಗಿ ಗುರುತಿಸಲಾಗಿದೆ. ಆತನ ಉದ್ದೇಶವೇಣು ಎಂದು ಇನ್ನೂ ಗುರುತಿಸಿಲ್ಲ. 78ರ ಹರೆಯದ ಟ್ರಂಪ್ ಅವರು ತಮ್ಮ ಭಾಷಣವನ್ನು ಆರಂಭಿಸಿದ್ದಾಗಲೇ ಗುಂಡು ಹಾರಿಸಲಾಗಿದೆ ಎಂದು ಕಾನೂನು ಜಾರಿ ಅಧಿಕಾರಿಗಳು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read