ಬೆಂಗಳೂರು : ರಾಜ್ಯ ಬಜೆಟ್ ಗೆ ಮುಹೂರ್ತ ಫಿಕ್ಸ್ ಆಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 16 ರಂದು ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಫೆ.16 ರಂದು ಬಜೆಟ್ ಮಂಡಿಸಲು ನಿರ್ಧರಿಸಲಾಗಿದೆ.
15ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಗ್ಯಾರಂಟಿ ಯೋಜನೆಗಳ ಜಾರಿ ಹಿನ್ನೆಲೆಯಲ್ಲಿ ವ್ಯಕ್ತಿಯ ಶಿಸ್ತಿನ ಬಜೆಟ್ ಮಂಡಿಸಲಿದ್ದಾರೆ ಎನ್ನುವ ಕುತೂಹಲ ಮೂಡಿದೆ.ಫೆ.12 ರಿಂದ ಫೆ.23 ರವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಫೆ.12 ರಂದು ರಾಜ್ಯಪಾಲ ಗೆಹ್ಲೋಟ್ ಭಾಷಣ ಮಾಡಲಿದ್ದಾರೆ.
ಫೆಬ್ರವರಿ 12ರಿಂದ ರಾಜ್ಯ ವಿಧಾನ ಮಂಡಲ ಜಂಟಿ ಅಧಿವೇಶನ ಆರಂಭವಾಗಲಿದ್ದು, ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ನಾಲ್ಕು ದಿನಗಳ ಕಾಲ ವಂದನಾ ನಿರ್ಣಯದ ಮೇಲೆ ಚರ್ಚೆ ನಡೆಯಲಿದ್ದು, ಫೆಬ್ರವರಿ 16 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 15ನೇ ಆಯವ್ಯಯ ಮಂಡಿಸಲಿದ್ದಾರೆ. ಫೆಬ್ರವರಿ 12 ರಿಂದ 23 ರವರೆಗೆ ವಿಧಾನ ಮಂಡಲ ಅಧಿವೇಶನ ನಡೆಯಲಿದೆ.