ಮೈಸೂರು: ವರ್ಗಾವಣೆ ವಿಚಾರಕ್ಕೆ ಮಾನಸಿಕ ಕಿರುಕುಳ ಆರೋಪ ಹಿನ್ನೆಲೆ ಕಚೇರಿಯಲ್ಲಿಯೇ ಮಹಿಳಾ ಸಿಬ್ಬಂದಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರುಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದಿದೆ.
ಮೈಸೂರು ತಾಲೂಕಿನ ವರುಣಾ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯಾಗಿರುವ ದಿವ್ಯಾ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥಗೊಂಡ ದಿವ್ಯಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವರುಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
