BREAKING : ಮಧ್ಯಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ : ಐವರು ಸಾವು, 25 ಮಂದಿಗೆ ಗಾಯ

ಮಧ್ಯಪ್ರದೇಶದ ಹರ್ದಾ ಜಿಲ್ಲೆಯ ಬೈರಾಘರ್ ಗ್ರಾಮದ ಪಟಾಕಿ ಕಾರ್ಖಾನೆಯಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಸ್ಫೋಟದಲ್ಲಿ ಐವರು ಸಾವನ್ನಪ್ಪಿರುವ ಶಂಕೆ ವ್ಯಕ್ತಿಯಾಗಿದ್ದು, ಸುಮಾರು 25 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಗಾಯಗೊಂಡ ಎಲ್ಲರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿದೆ. ಸದ್ಯ, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್ಡಿಆರ್ಎಫ್) ಆಂಬ್ಯುಲೆನ್ ಜೊತೆ ಸ್ಥಳಕ್ಕೆ ದೌಡಾಯಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಬೆಂಕಿಯ ಕೆನ್ನಾಲಿಗೆಗೆ ಹಲವರು ಸಿಲುಕಿದ್ದು, ಪ್ರಾಣ ಉಳಿಸಿಕೊಳ್ಳಲು ಓಡುತ್ತಿರುವ  ದೃಶ್ಯಗಳು ಮೊಬೈಲ್ ನಲ್ಲಿ ಸೆರೆಯಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read