BREAKING : ನಾಳೆಯ `ಕರ್ನಾಟಕ ಬಂದ್’ ಗೆ `ಫಿಲ್ಮ್ ಚೇಂಬರ್’ ಬೆಂಬಲ : ಪ್ರತಿಭಟನೆಯಲ್ಲಿ ನಟ, ನಟಿಯರು ಭಾಗಿ!

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರಿಬಿಡುತ್ತಿರುವ ಸರ್ಕಾರದ ಕ್ರಮ ಖಂಡಿಸಿ ನಾಳೆ ಅಖಂಡ ಕರ್ನಾಟಕ ಬಂದ್ ನಡೆಸಲು ಕನ್ನಡ ಪರ ಸಂಘಟನೆಗಳು ಕರೆ ಕೊಟ್ಟಿವೆ.

ನಾಳೆಯ ಅಖಂಡ ಕರ್ನಾಟಕ ಬಂದ್ ಗೆ ಫಿಲ್ಮ್ ಚೇಂಬರ್ ಬೆಂಬಲ  ಸೂಚಿಸಿದ್ದು, ಕರ್ನಾಟಕ ಬಂದ್ ಪ್ರತಿಭಟನೆಯಲ್ಲಿ ನಟ ಶಿವರಾಜ್ ಕುಮಾರ್ ಸೇರಿದಂತೆ ಹಲವು ನಟ, ನಟಿಯರು ಭಾಗಿಯಾಗುವಂತೆ ಆಹ್ವಾನ ನೀಡಲಾಗಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್​ಎಂ ಸುರೇಶ್ ಹೇಳಿದ್ದಾರೆ.

ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲವನ್ನ ಘೋಷಿಸಿದ್ವು. ಪ್ರಮುಖವಾಗಿ ಹೋಟೆಲ್ ಅಸೋಸಿಯೇಷನ್, ಖಾಸಗಿ ವಾಹನ ಮಾಲೀಕರ ಸಂಘಟನೆಗಳು, ಒಲಾ ಊಬರ್ ಸಂಘಟನೆಗಳು ಕರ್ನಾಟಕ ಬಂದ್ ಗೆ ಬೆಂಬಲ ನೀಡಿದೆ. ಈಗಾಗಲೇ 104 ಸಂಘಟನೆಗಳು ಬೆಂಬಲ ಘೋಷಿಸಿದೆ.

ಲಾರಿ ಮಾಲೀಕರ ಸಂಘ, ಜಲಮಂಡಳಿ ನೌಕರರ ಸಂಘ, ಹೋಟೆಲ್ ಅಸೋಸಿಯೇಷನ್ ಬೆಂಬಲ , ಆದರ್ಶ ಆಟೋ ಯೂನಿಯನ್, ಓಲಾ ಉಬರ್ ಚಾಲಕರ ಸಂಘ, ಕರ್ನಾಟಕ ಕೈಗಾರಿಕೆಗಳ ಸಂಘ, ಕರ್ನಾಟಕ ರಸ್ತೆ ಸಾರಿಗೆ ಕ್ರಿಯಾ ಸಮಿತಿ, ವಿದ್ಯಾರ್ಥಿ ಸಂಘಟನೆಗಳು ಸಾಥ್ ನೀಡಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read