BIG NEWS : 1000 ‘ಗ್ರಾಮ ಆಡಳಿತ ಅಧಿಕಾರಿ’ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ , ಈ ರೀತಿ ಚೆಕ್ ಮಾಡಿ |V.A Recruitment 2024

ಕಂದಾಯ ಘಟಕದಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಖಾಂತರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿತ್ತು.ಇದೀಗ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟವಾಗಿದ್ದು, ಅಭ್ಯರ್ಥಿಗಳು ಈ ಕೆಳಗಿನ ಹಂತಗಳನ್ನು ಅನುಸರಿಸುವ ಮೂಲಕ ಚೆಕ್ ಮಾಡಿಕೊಳ್ಳಬಹುದಾಗಿದೆ.

ಆಯ್ಕೆಪಟ್ಟಿ ಚೆಕ್ ಮಾಡುವುದು ಹೇಗೆ..?

1) ಅಭ್ಯರ್ಥಿಗಳು ತಮ್ಮ ಜಿಲ್ಲೆಯ ಅಧಿಕೃತ ವೆಬ್ ಸೈಟ್ ಭೇಟಿ ನೀಡಿ
2) ನೀವು ಮೈಸೂರು ಜಿಲ್ಲೆಯವರಾಗಿದ್ದರೆ https://mysore.nic.in ಭೇಟಿ ನೀಡಿ
3) ನಂತರ ಮುಖಪುಟದಲ್ಲಿ Mysore District Village Administrative Officer Recruitment 2024 – Final Selection List / VAO Additional Selection List / VAO Waiting List ಎಂಬುದರ ಮೇಲೆ ಕ್ಲಿಕ್ ಮಾಡಿ
4) ನಂತರ ಪಿಡಿಎಫ್ ವೆಬ್ಪೇಜ್ ಓಪನ್ ಆಗುತ್ತದೆ.
5) ಇಲ್ಲಿ ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ .

ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮುಖೇನ ನೇಮಕಾತಿ ಮಾಡಲು ಅಧಿಸೂಚನೆ ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿರುತ್ತದೆ. ಅದರಂತೆ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ದಿನಾಂಕ 29-09-2024, 26-10-2024 ಹಾಗೂ 27-10-2024 ರಂದು ಕಡ್ಡಾಯ ಕನ್ನಡ ಹಾಗೂ ಪತ್ರಿಕೆ-1 ಮತ್ತು ಪತ್ರಿಕೆ-2ರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ ಫಲಿತಾಂಶ ಪ್ರಕಟಿಸಲಾಗಿದೆ. ವಿಎಒ ಹುದ್ದೆಗಳಿಗೆ ಜನವರಿ ಮೊದಲನೇ ವಾರದಲ್ಲಿ 1:1 ತಾತ್ಕಾಲಿಕ ಆಯ್ಕೆಪಟ್ಟಿ ಹಾಗೂ ಹೆಚ್ಚುವರಿ ಆಯ್ಕೆಪಟ್ಟಿಗಳನ್ನು ಬಿಡುಗಡೆ ಮಾಡಲಾಗಿತ್ತು. ಆಕ್ಷೇಪಣೆಗಳು ಇದ್ದಲ್ಲಿ, ದಿನಾಂಕ 23-01-2025 ರ ಸಂಜೆ 05-30 ರವರೆಗೆ ಸಲ್ಲಿಸಲು ಅವಕಾಶ ನೀಡಲಾಗಿತ್ತು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read