ಬೆಂಗಳೂರು: ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಕುರುಬ ಸಮುದಾಯದ ಎಸ್.ಟಿ. ಮೀಸಲಾತಿ ವಿಚಾರದ ಬಗ್ಗೆ ಮಾತನಾಡಿದ್ದ ಕುರಿತಂತೆ ಛಲವಾದಿ ನಾರಾಯಣಸ್ವಾಮಿ ಮತ್ತು ಮೈಸೂರಿನ ಕೆಆರ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಶ್ರೀವತ್ಸ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ 353(2) ರ ಅಡಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಕುರುಬ ಸಮಾಜದ ಮುಖಂಡ ಸಿದ್ದಣ್ಣ ತೇಜಿ ಅವರ ದೂರಿನ ಅನ್ವಯ ಎಫ್ಐಆರ್ ದಾಖಲಾಗಿದೆ. ಬೆಳಗ್ಗೆ ಕುರುಬ ಸಮುದಾಯ ಮುಖಂಡರು ಡಿಜಿ ಐಜಿಪಿಗೆ ದೂರು ನೀಡಿದ್ದು, ಅವರ ಸೂಚನೆಯಂತೆ ಎಫ್ಐಆರ್ ದಾಖಲಾಗಿದೆ.