ಮೈಸೂರು: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪಿಸ್ತೂಲ್ ಹಿಡಿದಿದ್ದ ಫೋಟೋವನ್ನು ಪೋಸ್ಟ್ ಮಾಡಿದ್ದ ಯುವಕನ ವಿರುದ್ಧ ಮೈಸೂರಿನ ಮಂಡಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಪಿಸ್ತೂಲ್ ಹಿಡಿದುಕೊಂಡಿದ್ದ ಫೋಟೋ ಹಾಕಿದ್ದ ಹಿನ್ನೆಲೆಯಲ್ಲಿ ಅಜೀಜ್ ಶರೀಫ್ ಎಂಬುವನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಭಯದ ವಾತಾವರಣ ಸೃಷ್ಟಿಸುವಂತೆ ಫೇಸ್ಬುಕ್ ನಲ್ಲಿ ಫೋಟೋ ಅಪ್ಲೋಡ್ ಮಾಡಿದ್ದ ಅಜೀಜ್ ಸವಾಯಿ ಚೌಕದಲ್ಲಿರುವ ಪರ್ಫ್ಯೂಮ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಮೈಸೂರಿನ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.