ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತರೀಕೆರೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ತರೀಕೆರೆಯ ಕೋಡಿ ಕ್ಯಾಂಪ್ ನಿವಾಸಿ ಯಾಸಿನ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬಿಎನ್ಎಸ್ ಕಾಯ್ದೆಯ 292, 197, 190 353(2) ರ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ವಿಶ್ವ ಹಿಂದೂ ಪರಿಷತ್ ಮುಖಂಡ ನಾರಾಯಣಪ್ಪ ನೀಡಿದ ದೂರಿನ ಮೇರೆಗೆ ಮೊಕದ್ದಮೆ ದಾಖಲಿಸಲಾಗಿದೆ.
ಯುವಕರು ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ ವಿಡಿಯೋ ವೈರಲ್ ಆಗಿದ್ದು, ವಿಡಿಯೋವನ್ನು ತರೀಕೆರೆ ಪೊಲೀಸರು ಎಫ್ಎಸ್ಎಲ್ ಗೆ ರವಾನೆ ಮಾಡಿದ್ದಾರೆ. ಮುಂಜಾಗ್ರತೆ ಕ್ರಮವಾಗಿ ತರೀಕೆರೆ ಪಟ್ಟಣದಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.