ಕೋಲಾರ: ರಸಗೊಬ್ಬರ ಮಳಿಗೆ, ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಕೋಲಾರ ಜಿಲ್ಲೆ, ಬಂಗಾರಪೇಟೆ ಹೊರವಲಯದ ಹುಣಸನಹಳ್ಳಿ ಸಮೀಪ ಘಟನೆ ನಡೆದಿದೆ.
ಆಗ್ರೋಸ್ ಕಂಪನಿಗೆ ಸೇರಿದ ಮಳಿಗೆ ಮತ್ತು ಗೋಧಾಮಿನಲ್ಲಿ ಆಕಸ್ಮಿಕ ಬೆಂಕಿ ತಗುಲಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ರಸಗೊಬ್ಬರ, ಕೀಟನಾಶಕಗಳು ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ.
ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಗ್ನಿ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.