ಕೋಲಾರ: ಚಲಿಸುತ್ತಿದ್ದ ಸಾರಿಗೆ ಬಸ್ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೋಲಾರ ತಾಲೂಕಿನ ಭಟ್ರಹಳ್ಳಿ ಗೇಟ್ ಸಮೀಪ ಘಟನೆ ನಡೆದಿದೆ.
ಸಾರಿಗೆ ಬಸ್ ನಲ್ಲಿ 50ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೋಲಾರದಿಂದ ಬೇತಮಂಗಲಕ್ಕೆ ಬಸ್ ತೆರಳುತ್ತಿತ್ತು. ಬೆಂಕಿ ಕಾಣಿಸಿಕೊಂಡ ಕೂಡಲೇ ಸ್ಥಳೀಯರು ಮತ್ತು ಪ್ರಯಾಣಿಕರು ಬೆಂಕಿಯನ್ನು ನಂದಿಸಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

