HomeKarnatakaBREAKING : ಬೆಂಗಳೂರಿನ ಅಂಗಡಿ ಮಳಿಗೆಯಲ್ಲಿ ಅಗ್ನಿ ಅವಘಡ : ಕೋಟ್ಯಾಂತರ ರೂ. ಮೌಲ್ಯದ ವಸ್ತುಗಳು...

BREAKING : ಬೆಂಗಳೂರಿನ ಅಂಗಡಿ ಮಳಿಗೆಯಲ್ಲಿ ಅಗ್ನಿ ಅವಘಡ : ಕೋಟ್ಯಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮ.!

ಬೆಂಗಳೂರು: ಬೆಂಗಳೂರಿನ ಅತ್ಯಂತ ಜನನಿಬಿಡ ಪ್ರದೇಶವಾದ ಚಿಕ್ಕಪೇಟೆಯ ಕುಂಬಾರಪೇಟೆಯಲ್ಲಿ ಬುಧವಾರ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಇಲ್ಲಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಇಡೀ ಕಟ್ಟಡ ದಟ್ಟ ಹೊಗೆಯಿಂದ ಆವೃತವಾಗಿತ್ತು.

ಮೂರು ಅಂತಸ್ತಿನ ಕಟ್ಟಡದಲ್ಲಿದ್ದ ಹಾರ್ಡ್ವೇರ್ ಗೋಡೌನ್ ಹಾಗೂ ಅಂಗಡಿ ಮಳಿಗೆಗಳಿಗೆ ಬೆಂಕಿ ತಗುಲಿದ್ದು, ಕ್ಷಣಾರ್ಧದಲ್ಲಿ ಜ್ವಾಲೆ ವ್ಯಾಪಿಸಿದೆ. ಇಂದು ಬೆಳಗ್ಗೆ 7 :30 ರ ಸುಮಾರಿಗೆ ವೇಳೆ ಘಟನೆ ನಡೆದಿದೆ. ಕಟ್ಟಡದಲ್ಲಿದ್ದ ಹಲವು ಅಂಗಡಿಗಳಿಗೆ ಬೆಂಕಿ ವ್ಯಾಪಿಸಿದೆ.

ವಸ್ತುಗಳು ಸುಟ್ಟು ಕರಕಲು: ಬೆಂಕಿಯ ಕೆನ್ನಾಲಿಗೆಗೆ ಗೋಡೌನ್ನಲ್ಲಿದ್ದ ಪ್ಲಾಸ್ಟಿಕ್ ಪೈಪ್ಗಳು ಹಾಗೂ ಕೋಟ್ಯಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.ಬೆಂಕಿ ಹತ್ತಿಕೊಂಡಿದ್ದರಿಂದ ಸುತ್ತಮುತ್ತಲ ಪ್ರದೇಶದಲ್ಲಿ ದಟ್ಟವಾದ ಕಪ್ಪು ಹೊಗೆ ಆವರಿಸಿದ್ದು, ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳಕ್ಕೆ ಅಗ್ನಿಶಾಮಕ ದಳ: ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ 4 ಅಗ್ನಿಶಾಮಕ ವಾಹನಗಳು ಧಾವಿಸಿದ್ದು, ಸಿಬ್ಬಂದಿಗಳು ಹರಸಾಹಸ ಪಟ್ಟು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಬೆಂಕಿ ಅವಘಡಕ್ಕೆ ನಿಖರ ಕಾರಣವೇನು ಎಂಬುದು ತನಿಖೆಯಿಂದ ತಿಳಿಯಬೇಕಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular