ಮುಂಬೈ: ಮಹಾರಾಷ್ಟ್ರದ ರಾಜಧಾನಿ ಮುಂಬೈನ ಗಿರ್ಗಾಂವ್ ಚೌಪಟ್ಟಿಯಲ್ಲಿರುವ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಶನಿವಾರ ರಾತ್ರಿ ಭಾರಿ ಬೆಂಕಿ ಅವಘಡ ಸಂಭವಿಸಿದೆ.
ಅಗ್ನಿಶಾಮಕ ದಳದ ತಂಡವು ಬೆಂಕಿಯನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಮೂವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಹೇಳಿಕೆಯಲ್ಲಿ ತಿಳಿಸಿದೆ.
ಕಟ್ಟಡದೊಳಗೆ ಅನೇಕ ಜನರು ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ. ಕಟ್ಟಡದ ಯಾವುದೇ ನಿವಾಸಿಗಳು ಅದರೊಳಗೆ ಸಿಕ್ಕಿಬಿದ್ದಿದ್ದಾರೆಯೇ ಎಂಬುದು ಸ್ಪಷ್ಟವಾಗಿಲ್ಲ ಎಂದು ಅಧಿಕಾರಿ ಹೇಳಿದರು. ರಂಗ್ನೇಕರ್ ರಸ್ತೆಯಲ್ಲಿರುವ ಗೋಮತಿ ಭವನದ ಎರಡನೇ ಮತ್ತು ಮೂರನೇ ಮಹಡಿಯಲ್ಲಿ ರಾತ್ರಿ 9.30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಕನಿಷ್ಠ ಎಂಟು ಅಗ್ನಿಶಾಮಕ ಎಂಜಿನ್ಗಳು, ಆರು ದೊಡ್ಡ ಟ್ಯಾಂಕರ್ಗಳು ಮತ್ತು ಇತರ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಗಿದ್ದು, ಬೆಂಕಿಯನ್ನು ನಂದಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.
https://twitter.com/ANI/status/1731023182172463306?ref_src=twsrc%5Etfw%7Ctwcamp%5Etweetembed%7Ctwterm%5E1731023182172463306%7Ctwgr%5Efce9e2e591b463f1654c61c392b49a93b6dc7c34%7Ctwcon%5Es1_c10&ref_url=https%3A%2F%2Fapi-news.dailyhunt.in%2F