HomeLatest NewsBREAKING: ಮನೆ ಬಳಿ ನಿಂತಿದ್ದಾಗಲೇ ಗ್ರಾಮ ಪಂಚಾಯಿತಿ ಸದಸ್ಯನ ಮೇಲೆ ಫೈರಿಂಗ್

BREAKING: ಮನೆ ಬಳಿ ನಿಂತಿದ್ದಾಗಲೇ ಗ್ರಾಮ ಪಂಚಾಯಿತಿ ಸದಸ್ಯನ ಮೇಲೆ ಫೈರಿಂಗ್

ನೆಲಮಂಗಲ: ಗ್ರಾಮ ಪಂಚಾಯಿತಿ ಸದಸ್ಯನ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ಘಟನೆ ನಡೆದಿದೆ.

ಗ್ರಾಮ ಪಂಚಾಯಿತಿ ಸದಸ್ಯ ಸಲೀಂ ಅವರ ಮೇಲೆ ಅಪರಿಚಿತರು ಫೈರಿಂಗ್ ಮಾಡಿದ್ದಾರೆ. ಮನೆಯ ಬಳಿ ಮಾತನಾಡುತ್ತ ನಿಂತಿದ್ದ ವೇಳೆಯಲ್ಲಿ ಫೈರಿಂಗ್ ಮಾಡಲಾಗಿದೆ. ಗುಂಡಿನ ದಾಳಿ ನಡೆಸಿದ ಆರೋಪಿಗಳು ಪರಾರಿಯಾಗಿದ್ದಾರೆ.

ಗುಂಡು ತಗುಲಿ ಸಲೀಂ ಕೈಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ನೆಲಮಂಗಲದ ಖಾಸಗಿ ಆಸ್ಪತ್ರೆಗೆ ಅವರು ದಾಖಲಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನೆಲಮಂಗಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular