ಬೆಳಗಾವಿ: ಬೆಳಗಾವಿಯಲ್ಲಿ ರಾಜ್ಯೋತ್ಸವ ಮೆರವಣಿಗೆಯ ವೇಳೆ ಐವರಿಗೆ ಚಾಕುವಿನಿಂದ ಇರಿಯಲಾಗಿದೆ. ಮೂವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗಾವಿಯ ಸದಾಶಿವನಗರದ ಚೆನ್ನಮ್ಮ ಸರ್ಕಲ್ ಬಳಿ ಘಟನೆ ನಡೆದಿದೆ. ರಾಜ್ಯೋತ್ಸವದ ಅಂಗವಾಗಿ ರೂಪಕಗಳ ಮೆರವಣಿಗೆ ನಡೆಸಲಾಗುತ್ತಿತ್ತು. ಮೆರವಣಿಗೆ ವೇಳೆ ಗುಂಪಿನಲ್ಲಿ ಏಕಾಏಕಿ ಬಂದ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದಾರೆ.
ಘಟನೆಯಲ್ಲಿ ಗುರುನಾಥ ಒಕ್ಕುಂದ, ಸಚಿನ್ ಕಾಂಬಳೆ, ಲೋಕೇಶ ಬೆಟಗೇರಿ, ಮಹೇಶ, ವಿನಾಯಕ, ನಜೀರ್ ಪಠಾಣ್ ಅವರು ಅವರಿಗೆ ಚಾಕುವಿನಿಂದ ಇರಿಯಲಾಗಿದೆ. ಮೆರವಣಿಗೆಯಲ್ಲಿ ಚಾಕುವಿನಿಂದ ಇರಿದು ದುಷ್ಕರ್ಮಿಗಳು, ಪರಾರಿಯಾಗಿದ್ದಾರೆ. ಬೆಳಗಾವಿ ಎಪಿಎಂಸಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
