HomeEntertainmentBREAKING : ಬಿಗ್ ಬಾಸ್ ಸ್ಪರ್ಧಿ 'ಡ್ರೋನ್ ಪ್ರತಾಪ್' ಗೆ ಫುಡ್ ಪಾಯ್ಸನ್ : ಆಸ್ಪತ್ರೆಗೆ...

BREAKING : ಬಿಗ್ ಬಾಸ್ ಸ್ಪರ್ಧಿ ‘ಡ್ರೋನ್ ಪ್ರತಾಪ್’ ಗೆ ಫುಡ್ ಪಾಯ್ಸನ್ : ಆಸ್ಪತ್ರೆಗೆ ದಾಖಲು

ಬೆಂಗಳೂರು : ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಗೆ ಫುಡ್ ಪಾಯ್ಸನ್ ಆಗಿದ್ದು,  ಆಸ್ಪತ್ರೆಗೆ ದಾಖಲಾಗಿದ್ದಾರೆ  ಎಂದು ತಿಳಿದು ಬಂದಿದೆ.

ಆದರೆ ಸೋಶಿಯಲ್ ಮೀಡಿಯಾದಲ್ಲಿ ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ. ಈ ಹಿನ್ನೆಲೆ ಸ್ಪಷ್ಟನೆ ನೀಡಿದ ಬಿಗ್‍ ಬಾಸ್ ‘ಡ್ರೋನ್ ಪ್ರತಾಪ್ ಗೆ ಫುಡ್ ಪಾಯ್ಸನ್ ಆಗಿದ್ದು, ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಸ್ಪಷ್ಟನೆ ನೀಡಿದೆ.

ಹಲವು ಮಂದಿ ಪ್ರತಾಪ್ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಅಂತ ಸುಳ್ಳು ಸುದ್ದಿ ಹರಡಿಸುತ್ತಿದ್ದಾರೆ. ಕೆಲವು ಮಂದಿ ಪ್ರತಾಪ್ ಅವರು ವಿಟಮಿನ್ ಮಾತ್ರೆಗಳನ್ನು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೂಡ ಹೇಳುತ್ತಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ನಮ್ಮ ಮಗನಿಗೆ ಫುಡ್ ಪಾಯ್ಸನ್ ಆಗಿದೆ ಎಂದು ಡ್ರೋನ್ ಪ್ರತಾಪ್ ತಂದೆ ಕೂಡ ಸ್ಪಷ್ಟನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿಂದೆ ‘ಡ್ರೋನ್’ ಮೂಲಕ ರಾಜ್ಯದಲ್ಲಿ ಭಾರಿ ಸುದ್ದಿಯಾದ ಡ್ರೋನ್ ಪ್ರತಾಪ್ ಸದ್ಯ ಬಿಗ್ ಬಾಸ್ ಸ್ಪರ್ಧಿಯಾಗಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಬಹಳ ಮುಗ್ದನಂತೆ ಆಟವಾಡುತ್ತಿರುವ ಡ್ರೋನ್ ಪ್ರತಾಪ್ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular