BREAKING : ಆಂಧ್ರ ಮಾಜಿ ಸಿಎಂ ‘ಚಂದ್ರಬಾಬು ನಾಯ್ಡು’ಗೆ ಮಧ್ಯಂತರ ಜಾಮೀನು ಮಂಜೂರು

ನವದೆಹಲಿ: ಕೌಶಲ್ಯ ಅಭಿವೃದ್ಧಿ ಹಗರಣ ಪ್ರಕರಣದಲ್ಲಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ನಾಲ್ಕು ವಾರಗಳ ಮಧ್ಯಂತರ ಜಾಮೀನು ನೀಡಲಾಗಿದೆ. ಮೂಲಗಳ ಪ್ರಕಾರ, ವೈದ್ಯಕೀಯ ಆಧಾರದ ಮೇಲೆ ಹೈಕೋರ್ಟ್ ಜಾಮೀನು ನೀಡಿದೆ.

ಕೌಶಲ್ಯ ಅಭಿವೃದ್ಧಿ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ರಾಜಮಹೇಂದ್ರವರಂನ ಕೇಂದ್ರ ಕಾರಾಗೃಹದಲ್ಲಿರುವ ಮಾಜಿ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರು ಈ ಹಿಂದೆ ವಿಜಯವಾಡ ಎಸಿಬಿ ನ್ಯಾಯಾಲಯದ ವಿಶೇಷ ನ್ಯಾಯಾಧೀಶರಿಗೆ ಪತ್ರ ಬರೆದಿದ್ದರು.ವೈದ್ಯಕೀಯ ಚಿಕಿತ್ಸೆ ಪಡೆಯುವ ಹಿನ್ನೆಲೆ ಅವರಿಗೆ 4 ವಾರ ಜಾಮೀನು ನೀಡಲಾಗಿದೆ.

ಅಕ್ಟೋಬರ್ 25 ರಂದು ಜೈಲು ಅಧಿಕಾರಿಗಳ ಮೂಲಕ ನ್ಯಾಯಾಧೀಶರಿಗೆ ಕಳುಹಿಸಿದ ಪತ್ರದಲ್ಲಿ, ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥರು ಇತ್ತೀಚಿನ ದಿನಗಳಲ್ಲಿ ಕೇಂದ್ರ ಕಾರಾಗೃಹದಲ್ಲಿ ಮತ್ತು ಸುತ್ತಮುತ್ತ ಸಂಭವಿಸಿದ ಕೆಲವು ಅಹಿತಕರ ಘಟನೆಗಳನ್ನು ಉಲ್ಲೇಖಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read