
ಕೌಶಲ್ಯ ಅಭಿವೃದ್ಧಿ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ರಾಜಮಹೇಂದ್ರವರಂನ ಕೇಂದ್ರ ಕಾರಾಗೃಹದಲ್ಲಿರುವ ಮಾಜಿ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರು ಈ ಹಿಂದೆ ವಿಜಯವಾಡ ಎಸಿಬಿ ನ್ಯಾಯಾಲಯದ ವಿಶೇಷ ನ್ಯಾಯಾಧೀಶರಿಗೆ ಪತ್ರ ಬರೆದಿದ್ದರು.ವೈದ್ಯಕೀಯ ಚಿಕಿತ್ಸೆ ಪಡೆಯುವ ಹಿನ್ನೆಲೆ ಅವರಿಗೆ 4 ವಾರ ಜಾಮೀನು ನೀಡಲಾಗಿದೆ.
ಅಕ್ಟೋಬರ್ 25 ರಂದು ಜೈಲು ಅಧಿಕಾರಿಗಳ ಮೂಲಕ ನ್ಯಾಯಾಧೀಶರಿಗೆ ಕಳುಹಿಸಿದ ಪತ್ರದಲ್ಲಿ, ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥರು ಇತ್ತೀಚಿನ ದಿನಗಳಲ್ಲಿ ಕೇಂದ್ರ ಕಾರಾಗೃಹದಲ್ಲಿ ಮತ್ತು ಸುತ್ತಮುತ್ತ ಸಂಭವಿಸಿದ ಕೆಲವು ಅಹಿತಕರ ಘಟನೆಗಳನ್ನು ಉಲ್ಲೇಖಿಸಿದ್ದಾರೆ.

