ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕಡೂರಿನ ಬಿಜೆಪಿ ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ ಹಲ್ಲೆ ನಡೆಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆ ಕಡೂರು ಪಟ್ಟಣದಲ್ಲಿ ಘಟನೆ ನಡೆದಿದೆ. ಬೆಳ್ಳಿ ಪ್ರಕಾಶ್ ಅವರ ಅಳಿಯ ಸಂದೇಶ್ ಕುಮಾರ್ ಮೇಲೆ ಹಲ್ಲೆ ನಡೆಸಲಾಗಿದೆ. ಕಾಂಗ್ರೆಸ್ ಕಾರ್ಯಕರ್ತ ಸಂತೋಷ್ ಮತ್ತು ಆತನ ಬೆಂಬಲಿಗರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಕಾರ್ ಓವರ್ ಟೇಕ್ ವಿಚಾರವಾಗಿ ಸಂತೋಷ್ ಮತ್ತು ಸಂದೇಶ್ ನಡುವೆ ವಾಗ್ವಾದ ನಡೆದು ಹಲ್ಲೆ ನಡೆಸಲಾಗಿದೆ.
ಬಿಜೆಪಿ ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ ಹಲ್ಲೆ ಖಂಡಿಸಿ ಕಡೂರು ಪೊಲೀಸ್ ಠಾಣೆಯ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳ ಬಂಧನಕ್ಕೆ ಒತ್ತಾಯಿಸಿದ್ದು, ಪೊಲೀಸರು ಕ್ರಮ ಕೈಗೊಂಡಿದ್ದಾರೆ.
