HomeKarnatakaBREAKING : ಮಾಜಿ ಸಿಎಂ ʻಜಗದೀಶ್ ಶೆಟ್ಟರ್ʼ ಬಿಜೆಪಿ ಮರು ಸೇರ್ಪಡೆ ʻಫಿಕ್ಸ್ʼ : ಕೆಲವೇ...

BREAKING : ಮಾಜಿ ಸಿಎಂ ʻಜಗದೀಶ್ ಶೆಟ್ಟರ್ʼ ಬಿಜೆಪಿ ಮರು ಸೇರ್ಪಡೆ ʻಫಿಕ್ಸ್ʼ : ಕೆಲವೇ ಕ್ಷಣಗಳಲ್ಲಿ ಅಧಿಕೃತ ಘೋಷಣೆ ಸಾಧ್ಯತೆ

ನವದೆಹಲಿ : ರಾಜ್ಯ ರಾಜಕಾರಣದಲ್ಲಿ ದೊಡ್ಡ ಬೆಳವಣಿಗೆಯೊಂದು ನಡೆದಿದ್ದು, ದೆಹಲಿಯಲ್ಲಿ ಗೃಹ ಸಚಿವ ಅಮಿತ್‌ ಶಾ ಅವರನ್ನು ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಭೇಟಿಯಾಗಿದ್ದು, ಮತ್ತೆ ಬಿಜೆಪಿ ಸೇರಲು ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ದೆಹಲಿಯಲ್ಲಿ ಜಗದೀಶ್‌ ಶೆಟ್ಟರ್‌ ಜೊತೆಗೆ  ಮಹತ್ವದ ಸಭೆ ನಡೆಸಿರುವ ಅಮಿತ್‌ ಶಾ ಬಿಜೆಪಿಗೆ ಬರುವಂತೆ ಹೇಳಿದ್ದಾರೆ ಎನ್ನಲಾಗಿದ್ದು, ಇದಕ್ಕೆ ಜಗದೀಶ್‌ ಶೆಟ್ಟರ್‌ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದ್ದು, ಇಂದು ಅಧಿಕೃತ ಘೋಷಣೆಯಾಗುವ ಸಾಧ್ಯತೆ ಇದೆ.

ಅಮಿತ್‌ ಶಾ ಜೊತೆಗೆ ಮಾತುಕತೆಯಲ್ಲಿ ಬಿಜೆಪಿ ಸೇರಲು ಜಗದೀಶ್‌ ಶೆಟ್ಟರ್‌ ಗ್ರೀನ್‌ ಸಿಗ್ನಲ್‌ ನೀಡಿದ್ದಾರೆ ಎನ್ನಲಾಗಿದ್ದು, ಸಂಜೆಯೊಳಗೆ ಅಧಿಕೃತ ಘೋಷಣೆಯಾಗಲಿದೆ. ಬಹುತೇಕ ಬಿಜೆಪಿ ಸೇರುವುದು ಫಿಕ್ಸ್‌ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರು ಕಳೆದ ವಿಧಾನಸಭೆ ಚುನಾವಣೆ ಸಮಯದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಗದೀಶ್‌ ಶೆಟ್ಟರ್‌ ಅವರನ್ನು ಮತ್ತೆ ಬಿಜೆಪಿಗೆ ಕರೆತರಲು ಹೈಕಮಾಂಡ್‌ ನಿರ್ಧರಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular