BREAKING : ಮಾಜಿ ಸಿಎಂ S.M ಕೃಷ್ಣ ನಿಧನದ ಹಿನ್ನೆಲೆ ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ.!

ಬೆಂಗಳೂರು : ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನದ ಹಿನ್ನೆಲೆ ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.

ನಿಧನರಾಗಿರುವ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಅಂತ್ಯಕ್ರಿಯೆಯನ್ನು ಅವರ ತವರೂರಾದ ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ(ಬುಧವಾರ) ನಡೆಯಲಿದೆ ಎಂದು ಮೂಲಗಳು ಮಾಹಿತಿ ನೀಡಿದೆ.

ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಇರುತ್ತದೆ, ಅಲ್ಲದೇ ನಾಳೆ ಬೆಳಗ್ಗೆ 8 ಗಂಟೆವರೆಗೆ ಎಸ್ ಎಂ ಕೃಷ್ಣ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ರಾಜ್ಯಾದ್ಯಂತ ಶೋಕಾಚರಣೆ

ಮಾಜಿ ಸಿಎಂ S.M ಕೃಷ್ಣ ನಿಧನರಾದ ಹಿನ್ನೆಲೆ ಇಂದಿನಿಂದ ಮೂರು ದಿನ ರಾಜ್ಯಾದ್ಯಂತ ಶೋಕಾಚರಣೆ ಘೋಷಿಸಲಾಗಿದೆ. ಹಾಗೂ ಸಕಲ ಸರ್ಕಾರಿ ಗೌರವಗಳೊಂದಿಗೆ ಎಸ್ ಎಂ ಕೃಷ್ಣ ಅಂತ್ಯಕ್ರಿಯೆ ನಡೆಸಲು ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ಕೇಂದ್ರ ಸಚಿವರಾಗಿದ್ದ ಶ್ರೀ ಎಸ್ ಎಂ ಕೃಷ್ಣ ರವರು ದಿನಾಂಕ: 10.12.2024ರ ಮಂಗಳವಾರದಂದು ಪೂರ್ವಾಹ್ನ 02:30ಕ್ಕೆ ನಿಧನರಾದ ವಿಷಯವನ್ನು ಕರ್ನಾಟಕ ರಾಜ್ಯ ಸರ್ಕಾರವು ತೀವ್ರ ಸಂತಾಪದಿಂದ ಈ ಮೂಲಕ ಪ್ರಕಟಿಸಿದೆ.ಹುಟ್ಟೂರಾದ ಮಂಡ್ಯ ಜಿಲ್ಲೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಮತ್ತು ದಿನಾಂಕ:10.12.2024 ರಿಂದ 12.12.2024 ರವರೆಗೆ (ಉಭಯ ದಿನಗಳು ಸೇರಿ) ಮೂರು ದಿನಗಳು ಶೋಕವನ್ನು ಆಚರಿಸಲಾಗುವುದು. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳು ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ಸರ್ಕಾರ ಅಧಿಸೂಚನೆ ಹೊರಡಿಸಿದೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read