HomeKarnatakaBREAKING : ಮಾಜಿ ಸಚಿವ 'ಮನೋಹರ್ ತಹಶೀಲ್ದಾರ್' ಇನ್ನಿಲ್ಲ |Manohar Tahsildar no more

BREAKING : ಮಾಜಿ ಸಚಿವ ‘ಮನೋಹರ್ ತಹಶೀಲ್ದಾರ್’ ಇನ್ನಿಲ್ಲ |Manohar Tahsildar no more

ಬೆಂಗಳೂರು : ತೀವ್ರ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ (80) ವಿಧಿವಶರಾಗಿದ್ದಾರೆ.

ಮನೋಹರ್ ತಹಶೀಲ್ದಾರ್ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಶಂಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಮನೋಹರ್ ತಹಶೀಲ್ದಾರ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗಲಿಲ್ಲ. ಹೀಗಾಗಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದರು. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಅವರ ಹುಟ್ಟೂರಾದ ಆದ ಅಕ್ಕಿಹೊಳಿ ಗ್ರಾಮದ ತೋಟದ ಜಮೀನಿನಲ್ಲಿ ಇಂದು ಅಂತ್ಯಕ್ರಿಯೆ ನೆರವೇರಲಿದೆ ಎಂದು ಮೂಲಗಳು ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular