HomeKarnatakaBREAKING: ಹೃದಯಾಘಾತದಿಂದ ಮಾಜಿ ಸಚಿವ ವೆಂಕಟರಮಣಪ್ಪ ನಿಧನ

BREAKING: ಹೃದಯಾಘಾತದಿಂದ ಮಾಜಿ ಸಚಿವ ವೆಂಕಟರಮಣಪ್ಪ ನಿಧನ

ಬೆಂಗಳೂರು: ಮಾಜಿ ಸಚಿವ ವೆಂಕಟರಮಣಪ್ಪ(80) ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಯಲ್ಲಿ ವೆಂಕಟರಮಣಪ್ಪ ವಿಧಿವಶರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ವೆಂಕಟರಮಣಪ್ಪ ಬೆಳಿಗ್ಗೆ ಆರು ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನಾಲ್ಕು ಬಾರಿ ತುಮಕೂರು ಜಿಲ್ಲೆಯ ಪಾವಗಡ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಎರಡು ಬಾರಿ ಸಚಿವರಾಗಿ ಅವರು ಕಾರ್ಯನಿರ್ವಹಿಸಿದ್ದರು. ವೆಂಕಟರಮಣ ಪುತ್ರ ವೆಂಕಟೇಶ್ ಪಾವಗಡ ಕ್ಷೇತ್ರದ ಶಾಸಕರಾಗಿದ್ದಾರೆ.

ಕಾಂಗ್ರೆಸ್​​ ಹಿರಿಯ ನಾಯಕ, ಮಾಜಿ ಸಚಿವ ವೆಂಕಟರಮಣಪ್ಪ ತುಮಕೂರು ಜಿಲ್ಲೆಯ ಪಾವಗಡದ ಹಿರಿಯ ರಾಜಕಾರಣಿ, ರಾಜ್ಯ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ದಶಕಗಳ ಕಾಲ ಜನಸೇವೆ ಮಾಡಿದ್ದರು. ಪಾವಗಡದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ಎರಡು ಬಾರಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಗ್ರಾಮೀಣ ಭಾಗದ ಅಭಿವೃದ್ದಿಗೆ ಒತ್ತು ನೀಡಿದ್ದರು. ಪಾವಗಡ ಭಾಗದಲ್ಲಿ ರಸ್ತೆ, ನೀರು, ವಿದ್ಯುತ್, ಶಿಕ್ಷಣ ಮುಂತಾದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಶ್ರಮಿಸಿದ್ದರು. ವಯೋಸಹಜ ಅನಾರೋಗ್ಯ ಕಾರಣ ವೆಂಕಟರಮಣಪ್ಪ ಕೆಲ ದಿನಗಳಿಂದ ಬೆಂಗಳೂರಿನ ಪೊರ್ಟೀಸ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಬೆಳಗ್ಗೆ ಸುಮಾರು 6 ಗಂಟೆಯ ಸುಮಾರಿಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular