HomeLatest NewsBREAKING: ಖ್ಯಾತ ನಟ ಶಾರುಖ್ ಖಾನ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ NCB ಮಾಜಿ ಅಧಿಕಾರಿ...

BREAKING: ಖ್ಯಾತ ನಟ ಶಾರುಖ್ ಖಾನ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ NCB ಮಾಜಿ ಅಧಿಕಾರಿ ಸಮೀರ್ ವಾಂಖೆಡೆ

ನವದೆಹಲಿ: ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ನಿರ್ದೇಶನದ ವೆಬ್ ಸರಣಿಯೊಂದರಲ್ಲಿ ತಮ್ಮ ಪಾತ್ರವನ್ನು ಅತ್ಯಂತ ಕೆಟ್ಟದಾಗಿ ಬಿಂಬಿಸಲಾಗಿದೆ ಎಂದು ಆರೋಪಿಸಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಮಾಜಿ ಅಧಿಕಾರಿ ಸಮೀರ್ ವಾಂಖೆಡೆ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಎರಡು ಕೋಟಿ ರೂಪಾಯಿ ಪರಿಹಾರ ಕೋರಿ ಶಾರುಖ್ ಖಾನ್ ಮತ್ತು ಅವರ ಒಡೆತನದ ರೆಡ್ ಚಿಲ್ಲೀಸ್ ಎಂಟರ್ ಟೈನ್ ಮೆಂಟ್ ವಿರುದ್ಧ ದೆಹಲಿ ಹೈಕೋರ್ಟ್ ನಲ್ಲಿ ಸಮೀರ್ ವಾಂಕೆಡೆ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ನೆಟ್ ಫ್ಲಿಕ್ಸ್ ನಲ್ಲಿ ಪ್ರಸಾರವಾಗುತ್ತಿರುವ ‘ದಿ ಬ್ಯಾಡ್ಸ್ ಆಫ್ ಬಾಲಿವುಡ್’ ವೆಬ್ ಸರಣಿಯಲ್ಲಿ ತಮ್ಮ ಪಾತ್ರವನ್ನು ದುರುದ್ದೇಶಪೂರಿತವಾಗಿ ಅತ್ಯಂತ ಕೆಟ್ಟದಾಗಿ ಬಿಂಬಿಸಲಾಗಿದ್ದು, ತೇಜೋವಧೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಾರುಖ್ ಖಾನ್ ಮತ್ತು ಅವರ ಒಡೆತನದ ರೆಡ್ ಚಿಲ್ಲೀಸ್ ಎಂಟರ್ ಟೈನ್ ಮೆಂಟ್ ಸಂಸ್ಥೆ ಎರಡು ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಸಮೀರ್ ಮನವಿ ಮಾಡಿದ್ದಾರೆ. ಈ ಹಣವನ್ನು ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗಾಗಿ ಟಾಟಾ ಮೆಮೋರಿಯಲ್ ಕ್ಯಾನ್ಸರ್ ಆಸ್ಪತ್ರೆಗೆ ದೇಣಿಗೆ ನೀಡುವುದಾಗಿ ಹೇಳಿದ್ದಾರೆ.

ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್ ಅವರನ್ನು ಸಮೀರ್ ವಾಂಖೆಡೆ ಅವರು ವಿಚಾರಣೆ ನಡೆಸಿದ್ದರು. ‘ದಿ ಬ್ಯಾಡ್ಸ್ ಆಫ್ ಬಾಲಿವುಡ್’ ವೆಬ್ ಸರಣಿ ನೆಟ್ ಫ್ಲಿಕ್ಸ್ ನಲ್ಲಿ ಸೆ. 18ರಿಂದ ಪ್ರಸಾರವಾಗುತ್ತಿದ್ದು, ಸದ್ದು ಮಾಡುತ್ತಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular