ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಚೆನ್ನಮ್ಮನವರ ರಕ್ತದೊತ್ತಡ, ನಾಡಿ ಮಿಡಿತ ಸ್ಥಿರವಾಗಿದೆ. ಉಸಿರಾಟದ ಸಮಸ್ಯೆಗೆ ಚಿಕಿತ್ಸೆ ಮುಂದುವರೆದಿದೆ.
ತಜ್ಞ ವೈದ್ಯರ ತಂಡದಿಂದ ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ಚೆನ್ನಮ್ಮನವರಿಗೆ ಚಿಕಿತ್ಸೆ ಮುಂದುವರೆದಿದೆ. ಉಸಿರಾಟದ ತೊಂದರೆ ಕಾರಣ ಚೆನ್ನಮ್ಮನವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಮೂರು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಡಾ. ಸತ್ಯನಾರಾಯಣ್ ಮತ್ತು ಡಾ. ಸುನಿಲ್ ಕಾರಂತ್ ಅವರ ತಂಡದಿಂದ ಚಿಕಿತ್ಸೆ ಮುಂದುವರಿದಿದೆ.
ಶುಕ್ರವಾರ ಆಸ್ಪತ್ರೆಗೆ ಭೇಟಿ ನೀಡಿದ್ದ ದೇವೇಗೌಡರು ಮತ್ತು ಅವರ ಪುತ್ರರಾದ ಹೆಚ್.ಡಿ. ಕುಮಾರಸ್ವಾಮಿ, ಹೆಚ್.ಡಿ. ರೇವಣ್ಣ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಆಸ್ಪತ್ರೆಗೆ ಭೇಟಿ ನೀಡಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದ್ದಾರೆ.

