HomeLatest NewsBREAKING: ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಳ್ಳತನ ಮಾಡ್ತಿದ್ದ ಏರ್ ಇಂಡಿಯಾದ ನಾಲ್ವರು ಸೇರಿ 5 ಮಂದಿ...

BREAKING: ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಳ್ಳತನ ಮಾಡ್ತಿದ್ದ ಏರ್ ಇಂಡಿಯಾದ ನಾಲ್ವರು ಸೇರಿ 5 ಮಂದಿ ಅರೆಸ್ಟ್

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಳ್ಳತನ ಮಾಡುತ್ತಿದ್ದ ನಾಲ್ವರನ್ನು ಬಂಧಿಸಲಾಗಿದೆ. ಏರ್ ಇಂಡಿಯಾ ಕಂಪನಿಯ ನಾಲ್ವರು ಸೇರಿ ಐವರು ಆರೋಪಿಗಳನ್ನು ಮಂಗಳೂರು ಬಜ್ಪೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನಿತಿನ್, ಸದಾನಂದ, ರಾಜೇಶ್, ಪ್ರವೀಣ್ ಫೆರ್ನಾಂಡಿಸ್ ಬಂಧಿತ ಆರೋಪಿಗಳು. 9 ವರ್ಷಗಳಿಂದ ಏರ್ ಇಂಡಿಯಾ ಕಂಪನಿಯಲ್ಲಿ ನಾಲ್ವರು ಕೆಲಸ ಮಾಡುತ್ತಿದ್ದರು. ಏರ್ ಇಂಡಿಯಾ ಕಂಪನಿಯ ನಾಲ್ವರು ಸೇರಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ.

ಏರ್ ಇಂಡಿಯ ಕಂಪನಿಯಲ್ಲಿ ನಾಲ್ವರು ಲೋಡರ್, ಅನ್ ಲೋಡರ್ ಕೆಲಸ ಮಾಡುತ್ತಿದ್ದರು. ಆಗಸ್ಟ್ 30ರಂದು ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಕ ತೆರಳಿದ್ದರು. ಅವರು ಲಗೇಜ್ ಪಡೆದು ನೋಡಿದಾಗ 56 ಗ್ರಾಂ ಚಿನ್ನಾಭರಣ ನಾಪತ್ತೆಯಾಗಿತ್ತು. ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. 5 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಗಟ್ಟಿ ಈ ಹಿಂದೆ ಕದ್ದಿದ್ದ ಎರಡು ಲಕ್ಷ ನಗದು ಜಪ್ತಿ ಮಾಡಲಾಗಿದೆ. ಬಂಧಿತ ಆರೋಪಿಗಳಿಂದ ಚಿನ್ನ ಖರೀದಿಸಿದ್ದ ರವಿರಾಜ್ ಎಂಬವನನ್ನು ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular