HomeIndiaBREAKING : ಜಮ್ಮು-ಕಾಶ್ಮೀರದಲ್ಲಿ ದೋಣಿ ಮುಳುಗಿ ನಾಲ್ವರು ಸಾವು, ಹಲವರು ನಾಪತ್ತೆ..!

BREAKING : ಜಮ್ಮು-ಕಾಶ್ಮೀರದಲ್ಲಿ ದೋಣಿ ಮುಳುಗಿ ನಾಲ್ವರು ಸಾವು, ಹಲವರು ನಾಪತ್ತೆ..!

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಝೀಲಂ ನದಿಯಲ್ಲಿ ಮಂಗಳವಾರ ಬೆಳಿಗ್ಗೆ ದೋಣಿ ಮಗುಚಿ ನಾಲ್ವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಹಾಗೂ ಘಟನೆಯಲ್ಲಿ ಹಲವರು ಕಾಣೆಯಾಗಿದ್ದಾರೆ ಎಂದು ಶಂಕಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಝೀಲಂ ನದಿಯಲ್ಲಿ ಮಂಗಳವಾರ ಬೆಳಿಗ್ಗೆ ದೋಣಿ ಮಗುಚಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಶ್ರೀ ಮಹಾರಾಜ ಹರಿ ಸಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಮುಜಾಫರ್ ಝರ್ಗರ್ ತಿಳಿಸಿದ್ದಾರೆ. ಸ್ಥಳೀಯರ ಪ್ರಕಾರ, ಶಾಲಾ ಮಕ್ಕಳು ಸೇರಿ ಹಲವಾರು ಮಂದಿ ದೋಣಿಯಲ್ಲಿದ್ದರು. ಎಸ್ಡಿಆರ್ಎಫ್ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಕಳೆದ ಎರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನದಿಯ ಹರಿವು ತುಂಬಾ ಹೆಚ್ಚಾಗಿದ್ದರಿಂದ ಈ ಘಟನೆ ನಡೆದಿದೆ.

ದೋಣಿಯಲ್ಲಿ ಹಲವಾರು ಶಾಲಾ ಮಕ್ಕಳು ಇದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.ಕಳೆದ ಎರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನದಿಯ ಹರಿವು ತುಂಬಾ ಹೆಚ್ಚಾಗಿದ್ದರಿಂದ ಈ ಘಟನೆ ನಡೆದಿದೆ.ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular