BREAKING: ಖಾಸಗಿ ಕಂಪನಿಯ ನಾಲ್ವರು ನೌಕರರ ಅಪಹರಣ: ಕ್ಷಿಪ್ರ ಕಾರ್ಯಾಚರಣೆಯಲ್ಲಿ ಪೊಲೀಸ್ ಸೇರಿ 8 ಆರೋಪಿಗಳು ಅರೆಸ್ಟ್

ಬೆಂಗಳೂರು: ಖಾಸಗಿ ಕಂಪನಿಯ ನಾಲ್ವರು ನೌಕರರನ್ನು ಅಪಹರಣ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರಮಂಗಲ ಠಾಣೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಹೆಡ್ ಕಾನ್ಸ್ಟೇಬಲ್ ಸೇರಿ 8 ಆರೋಪಿಗಳನ್ನು ಬಂಧಿಸಿದ್ದಾರೆ.

ಕೋಲಾರ ಜಿಲ್ಲೆ ಮಾಲೂರು ಗ್ರಾಮಾಂತರ ಠಾಣೆಯಲ್ಲಿ ತನಿಖಾಧಿಕಾರಿ ಸಹಾಯಕನಾಗಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಚಲಪತಿ ಸೇರಿ ಎಂಟು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ಎರಡು ಕಾರ್ ಗಳನ್ನು ಜಪ್ತಿ ಮಾಡಲಾಗಿದೆ. ತನಿಖೆಯ ವೇಳೆ ಆರೋಪಿಗಳಿಂದ ಅಪಹರಣಕ್ಕೊಳಗಾಗಿದ್ದ ನೌಕರರ ಖಾತೆಯಿಂದ 18.9 ಲಕ್ಷ ರೂಪಾಯಿ ಹಣವನ್ನು ತಮ್ಮ ಸಂಬಂಧಿಕರೊಬ್ಬರ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿರುವುದು ಕಂಡುಬಂದಿದ್ದು, ಆ ಹಣವನ್ನು ಫ್ರೀಜ್ ಮಾಡಲಾಗಿದೆ.

ಖಾಸಗಿ ಕಂಪನಿ ನೌಕರರ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಸ್ಪಂದಿಸಿ ವಿಚಾರಣೆ ನಡೆಸಲಾಗಿದೆ. ಕೋರಮಂಗಲದಲ್ಲಿರುವ ಕಾಲ್ ಸೆಂಟರ್ ನಲ್ಲಿ ನಾಲ್ವರು ನೌಕರರು ಕೆಲಸ ಮಾಡುತ್ತಿದ್ದು, ಅವರ ಖಾತೆಯಲ್ಲಿ ಲಕ್ಷಾಂತರ ಹಣ ಇರುವ ಮಾಹಿತಿ ಪಡೆದ ಆರೋಪಿಗಳು, ಶುಕ್ರವಾರ ಮಧ್ಯರಾತ್ರಿ ಕಾಲ್ ಸೆಂಟರ್ ಬಳಿಗೆ ಬಂದು ನಾಲ್ವರು ನೌಕರರನ್ನು ಅಪಹರಿಸಿದ್ದಾರೆ. ಮಾಲೂರಿನ ಖಾಸಗಿ ಕಾಲೇಜಿನಲ್ಲಿ ಕೂಡಿ ಹಾಕಿ ಬೆದರಿಸಿ ಅವರ ಖಾತೆಯಲ್ಲಿದ್ದ 18.9 ಲಕ್ಷ ರೂ. ಹಣವನ್ನು ತಮ್ಮ ಖಾತೆಗೆ ವರ್ಗಾಯಿಸಿಕೊಂಡಿದ್ದಾರೆ. ಅದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿ ಕೋರಮಂಗಲ ಠಾಣೆ ಪೋಲೀಸರಿಗೆ ದೂರು ನೀಡಿದ್ದು, ಕೂಡಲೇ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ.

ಆರೋಪಿಗಳು ಶುಕ್ರವಾರ ಮಧ್ಯರಾತ್ರಿ ಎರಡು ಕಾರ್ ಗಳಲ್ಲಿ ಬಂದು ತಾವು ಪೊಲೀಸರೆಂದು ಹೇಳಿಕೊಂಡಿದ್ದಾರೆ. ಕಾಲ್ ಸೆಂಟರ್ ಮೂಲಕ ಜನರನ್ನು ಡಿಜಿಟಲ್ ಅರೆಸ್ಟ್ ಮಾಡಿ ಅವರಿಂದ ಹಣ ಸುಲಿಗೆ ಮಾಡುತ್ತಿರುವ ಸಂಬಂಧ ಬಂಧಿಸುವದಾಗಿ ಹೇಳಿ ನಾಲ್ವರು ನೌಕರರನ್ನು ಅಪಹರಿಸಿ ಮಾಲೂರಿನ ಕಾಲೇಜಿನಲ್ಲಿ ಅಕ್ರಮ ಬಂಧನದಲ್ಲಿರಿಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read