BREAKING : ಆಸ್ಟ್ರೇಲಿಯಾದ ಸಮುದ್ರದಲ್ಲಿ ಮುಳುಗಿ ನಾಲ್ವರು ಭಾರತೀಯರು ಸಾವು

ಮೆಲ್ಬೋರ್ನ್ ನಿಂದ ದಕ್ಷಿಣಕ್ಕೆ 130 ಕಿ.ಮೀ ದೂರದಲ್ಲಿರುವ ಆಸ್ಟ್ರೇಲಿಯಾದ ವಿಕ್ಟೋರಿಯಾದ ಫಿಲಿಪ್ ದ್ವೀಪದ ಫಾರೆಸ್ಟ್ ಗುಹೆಗಳ ಬೀಚ್ ನಲ್ಲಿ ನಾಲ್ವರು ಭಾರತೀಯರು ಮುಳುಗಿ ಸಾವನ್ನಪ್ಪಿದ್ದಾರೆ.

ಕ್ಯಾನ್ಬೆರಾದಲ್ಲಿನ ಭಾರತೀಯ ಹೈಕಮಿಷನ್ ಗುರುವಾರ (ಜನವರಿ 25) ಈ ಘಟನೆಯನ್ನು ದೃಢಪಡಿಸಿದೆ. ಮೃತರಲ್ಲಿ 20 ವರ್ಷದ ಪುರುಷ ಮತ್ತು ಇಬ್ಬರು ಮಹಿಳೆಯರು ಮತ್ತು 40 ರ ಹರೆಯದ ಮಹಿಳೆ ಸೇರಿದ್ದಾರೆ.

ಜನವರಿ 24 ರಂದು ಮಧ್ಯಾಹ್ನ 3:30 ರ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಸಮುದ್ರ ಗುಹೆಗಳಿಗೆ ಹೆಸರುವಾಸಿಯಾದ ಜನಪ್ರಿಯ ಪ್ರವಾಸಿ ತಾಣದಲ್ಲಿ ಈ ದುರಂತ ಸಂಭವಿಸಿದೆ.  ಮಧ್ಯಾಹ್ನ 3.30 ರ ಸುಮಾರಿಗೆ ನ್ಯೂ ಹೇವನ್ ಬಳಿ ನಾಲ್ಕು ಜನರು ನೀರಿನಲ್ಲಿ ಮುಳುಗುತ್ತಿರುವುದನ್ನು  ಕಂಡು ತುರ್ತು ಸೇವಾ ಸಿಬ್ಬಂದಿ ರಕ್ಷಿಸಲು ಪ್ರಯತ್ನಿಸಿದ್ದರು, ಆದರೆ ಸಾಧ್ಯವಾಗಲಿಲ್ಲ. ನಾಲ್ವರನ್ನು ತೀರಕ್ಕೆ ಕರೆದುಕೊಂಡು ಬರುವಷ್ಟರಲ್ಲಿ ಮೃತಪಟ್ಟಿದ್ದರು ಎಂದು ಮೂಲಗಳು ತಿಳಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read