HomeKarnatakaBREAKING : ವಿಜಯಪುರದಲ್ಲಿ ಭೀಕರ ಅಪಘಾತ : ಅಪರಿಚಿತ ವಾಹನ ಹರಿದು ನಾಲ್ವರು ಸ್ಥಳದಲ್ಲೇ ಸಾವು

BREAKING : ವಿಜಯಪುರದಲ್ಲಿ ಭೀಕರ ಅಪಘಾತ : ಅಪರಿಚಿತ ವಾಹನ ಹರಿದು ನಾಲ್ವರು ಸ್ಥಳದಲ್ಲೇ ಸಾವು

ವಿಜಯಪುರ : ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ರಸ್ತೆ ಬದಿ ಕುಳಿತಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ವಿಜಯಪುರ ರಾಷ್ಟ್ರೀಯ ಹೆದ್ದಾರಿ 50 ರಲ್ಲಿನ ಟೋಲ್ ಗೇಟ್ ಬಳಿಕ ಈ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ಸರ್ವೀಸ್ ರಸ್ತೆಯ ಡಿವೈಡರ್ ಮೇಲೆ ಕುಳಿತಿದ್ದ ನಾಲ್ವರ ಮೇಲೆ ಅಪರಿಚಿತ ವಾಹನ ಹರಿದ ಪರಿಣಾಮ ನಾಲ್ವರು ಯುವಕರು ಸ್ಥಳದಲ್ಲಿ ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತರನ್ನು ವಿಜಯಪುರ ಶಿವಾನಂದ ಚೌಧರಿ(25), ಪ್ರವೀಣ್ ಪಾಟೀಲ್(30), ಸುನೀಲ್(26), ಈರಣ್ಣ(26) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular