BIG UPDATE : ಹರಿಯಾಣದಲ್ಲಿ ಬಾಯ್ಲರ್ ಸ್ಪೋಟ ಪ್ರಕರಣ : ನಾಲ್ವರು ಕಾರ್ಮಿಕರು ಸಾವು, ಹಲವರ ಸ್ಥಿತಿ ಗಂಭೀರ

ಹರಿಯಾಣ : ಬಿಡಿಭಾಗಗಳ ತಯಾರಿಕಾ ಘಟಕದಲ್ಲಿ ಬಾಯ್ಲರ್ ಸ್ಫೋಟಗೊಂಡು ನಾಲ್ವರು ಕಾರ್ಮಿಕರು ಮೃತಪಟ್ಟಿದ್ದು, ಇತರ 10ಕ್ಕೂ ಹೆಚ್ಚು ಮಂದಿ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಮೂವರು ಮಂಗಳವಾರ ರಾತ್ರಿ ರೋಹ್ಟಕ್ನ ಪಿಜಿಐಎಂಎಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರೆ, ಇನ್ನೊಬ್ಬರು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಇನ್ಸ್ಪೆಕ್ಟರ್ ಜಗದೀಶ್ ಚಂದರ್ ತಿಳಿಸಿದ್ದಾರೆ.ಮೃತರನ್ನು ಉತ್ತರ ಪ್ರದೇಶ ಮೂಲದ ಅಜಯ್ (32), ವಿಜಯ್ (37), ರಾಮು (27), ರಾಜೇಶ್ (38) ಎಂದು ಗುರುತಿಸಲಾಗಿದೆ.

ಧರುಹೇರಾ ಕೈಗಾರಿಕಾ ಪ್ರದೇಶದ ಉತ್ಪಾದನಾ ಘಟಕದಲ್ಲಿ ಶನಿವಾರ ಸ್ಫೋಟ ಸಂಭವಿಸಿದೆ.ಘಟನೆಯಲ್ಲಿ 40 ಕಾರ್ಮಿಕರಿಗೆ ಸುಟ್ಟ ಗಾಯಗಳಾಗಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಪೈಕಿ 10 ಕಾರ್ಮಿಕರನ್ನು ರೇವಾರಿ ಟ್ರಾಮಾ ಸೆಂಟರ್ಗೆ, 20 ಕ್ಕೂ ಹೆಚ್ಚು ಕಾರ್ಮಿಕರನ್ನು ಪಿಜಿಐಎಂಎಸ್ ರೋಹ್ಟಕ್ಗೆ, ನಾಲ್ವರನ್ನು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ಮತ್ತು ಇತರರನ್ನು ಧರುಹೆರಾಗೆ ದಾಖಲಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read