ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ಹೆಗ್ಗನಹಳ್ಳಿಯಲ್ಲಿ ಘಟನೆ ನಡೆದಿದೆ. ಮನೆಯ ಯಜಮಾನ ಕುಮಾರಪ್ಪ(60) ನೇಣಿಗೆ ಶರಣಾಗಿದ್ದಾರೆ. ವಿಷ ಸೇವಿಸಿದ ಪತ್ನಿ, ಮಕ್ಕಳ ಪೈಕಿ ಮಗ ಅರುಣ್(30) ಸಾವನ್ನಪ್ಪಿದ್ದಾರೆ.
ಪತ್ನಿ ರಮಾ ಮತ್ತು ಮತ್ತೊಬ್ಬ ಮಗ ಅಕ್ಷಯ್ ಅವರ ಸ್ಥಿತಿ ಗಂಭೀರವಾಗಿದ್ದು, ಅಸ್ವಸ್ಥ ತಾಯಿ, ಮಗನನ್ನು ಹೆಬ್ಬಾಳದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಮೃತರ ಮನೆಯಲ್ಲಿ ಮದ್ಯದ ಬಾಟಲಿ ಮತ್ತು ವಿಷದ ಬಾಟಲಿ ಪತ್ತೆಯಾಗಿವೆ. ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 
			 
		 
		 
		 
		 Loading ...
 Loading ... 
		 
		