ಹಾಸನಾಂಬೆ: ಹಾಸನಾಂಬೆ ದರ್ಶನದ ವೇಳೆ ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ನಾಲ್ವರು ಸಿಬ್ಬಂದಿಯನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಗೋಲ್ಡ್ ಕಾರ್ಡ್ ಕೌಂಟರ್ ನಲ್ಲಿ ಕಾರ್ಡ್ ಗಳನ್ನು ಸಿಬ್ಬಂದಿ ಸ್ಕ್ಯಾನ್ ಮಾಡದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ. ಕಾರ್ಡ್ ಸ್ಕ್ಯಾನ್ ಮಾಡದೆ ಭಕ್ತರನ್ನು ದೇಗುಲದ ಒಳಗೆ ಬಿಟ್ಟ ಆರೋಪ ಕೇಳಿ ಬಂದಿದೆ. ಆರ್.ಐ.ಗಳಾದ ಗೋವಿಂದರಾಜ್, ಯೋಗಾನಂದ್, ವಿಎಗಳಾದ ಸಂತೋಷ್ ಅಂಬಿಗರ, ಶಿರಾಜ್ ಮಹಿಮಾ ಪಟೇಲ್ ಅವರನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಲತಾ ಕುಮಾರಿ ಆದೇಶ ಹೊರಡಿಸಿದ್ದಾರೆ.
ಮೊದಲ ದಿನವೂ ಇಬ್ಬರು ಸಿಬ್ಬಂದಿ ಅಮಾನತು ಮಾಡಲಾಗಿತ್ತು. ಕರ್ತವ್ಯದ ಐಡಿ ಕಾರ್ಡ್ ದುರುಪಯೋಗ ಆರೋಪದಡಿ ಅಮಾನತು ಮಾಡಲಾಗಿತ್ತು. ಬೇಜವಾಬ್ದಾರಿತನ ತೋರುವ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗಿದೆ.