HomeKarnatakaBREAKING : ಚಿಕ್ಕಬಳ್ಳಾಪುರದಲ್ಲಿ ಕಾರು ಕೆರೆಗೆ ಉರುಳಿ ಬಿದ್ದು ಘೋರ ದುರಂತ : ನಾಲ್ವರು ಯುವಕರು...

BREAKING : ಚಿಕ್ಕಬಳ್ಳಾಪುರದಲ್ಲಿ ಕಾರು ಕೆರೆಗೆ ಉರುಳಿ ಬಿದ್ದು ಘೋರ ದುರಂತ : ನಾಲ್ವರು ಯುವಕರು ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಕಾರು ಕೆರೆಗೆ ಉರುಳಿ ಬಿದ್ದು ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ ನಗರದ ಬೈಪಾಸ್‌ ಬಳಿ ಬೈರಸಾಗರ ಕೆರೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರು ಉರುಳಿ ಬಿದ್ದ ಪರಿಣಾಮ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನಿಂದ ಬಾಗೇಪಲ್ಲಿ ಕಡೆಗೆ ಹೋಗುತ್ತಿದ್ದ ವೇಳೆ ಕಾರು ಕೆರೆಗೆ ಉರುಳಿ ಬಿದ್ದಿದ್ದು, ಕಾರಿನಲ್ಲಿದ್ದ ಪವನ್‌ (22), ಆರ್ಯನ್‌ (22),  ವಸಂತ್‌ (21), ಹಾಗೂ ಟ್ಯಾಗೂರ್‌ (21) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular