BREAKING : ಡಿ.ಕೆ ಸುರೇಶ್ ತಂಗಿ ಹೆಸರಿನಲ್ಲಿ ವಂಚನೆ : ವಿಚಾರಣೆಗೆ ಹಾಜರಾಗುವಂತೆ ಐಶ್ವರ್ಯಾ ಗೌಡಗೆ ನೋಟಿಸ್.!

ಬೆಂಗಳೂರು: ಡಿ.ಕೆ.ಸುರೇಶ್ ಸಹೋದರಿ ಎಂದು ನಂಬಿಸಿ ಚಿನ್ನದ ಅಂಗಡಿ ಮಾಲಕಿಗೆ ಕೋಟಿ ಕೋಟಿ ರೂಪಾಯಿ ವಂಚಿಸಿರುವ ಘಟನೆಗೆ ಸಂಬಂಧಿಸಿದಂತೆ ಐಶ್ವರ್ಯಾ ಗೌಡ ಅಲಿಯಾಸ್ ನವ್ಯಗೆ ಪೊಲೀಸರು ನೋಟಿಸ್ ನೀಡಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಐಶ್ವರ್ಯಾ ಗೌಡ ಅಲಿಯಾಸ್ ನವ್ಯಗೆ ಪೊಲೀಸರು ನೋಟಿಸ್ ನೀಡಿದ್ದಾರೆ.

ಬೆಂಗಳೂರಿನ ಆರ್.ಆರ್.ನಗರದ ನಿವಾಸಿ ಐಶ್ವರ್ಯಾ ಗೌಡ ಅಲಿಯಾಸ್ ನವ್ಯಶ್ರೀ ಎಂಬ ಮಹಿಳೆ ತಾನು ಡಿ.ಕೆ.ಸುರೇಶ್ ಸಹೋದರಿ ಎಂದು ಹೇಳಿಕೊಂಡು ವರಾಹಿ ವರ್ಲ್ಡ್ ಆಫ್ ಗೋಲ್ಡ್ ಚಿನ್ನದ ಅಂಗಡಿ ಮಾಲಕಿ ವನಿತಾ ಐತಾಳ್ ಎಂಬುವವರಿಗೆ 9.14 ಕೋಟಿ ರೂ ವಂಚಿಸಿದ್ದಾಳೆ ಎಂಬ ಆರೋಪ ಕೇಳಿಬಂದಿದೆ.

9.14 ಕೋಟಿಯ 14 ಕೆಜಿ 660 ಗ್ರಾಂ ಚಿನ್ನ ಪಡೆದು ಐಶ್ವರ್ಯ ಗೌಡ ವಂಚನೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ತಾನು ಡಿ.ಕೆ.ಸುರೇಶ್ ಸಹೋದರಿ, ತನಗೆ ದೊಡ್ಡ ದೊಡ್ಡ ರಾಜಕಾರಣಿಗಳ ಪರಿಚಯವಿದೆ ಎಂದು ಹೇಳಿ ಹಂತ ಹಂತವಾಗಿ ಚಿನ್ನ ಖರೀದಿಸಿ ವಂಚಿಸಿದ್ದಾಳೆ. ಆರೋಪಿ ಐಶ್ವರ್ಯ ಗೌಡ ವಿರುದ್ಧ ಚಂದ್ರಾ ಲೇಔಟ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read