HomeLatest NewsBREAKING: ಸಾಲ ವಾಪಸ್ ನೀಡದಿದ್ದಕ್ಕೆ ಕೊಡಲಿಯಿಂದ ಕೊಚ್ಚಿ ಸ್ನೇಹಿತನ ಬರ್ಬರ ಹತ್ಯೆ

BREAKING: ಸಾಲ ವಾಪಸ್ ನೀಡದಿದ್ದಕ್ಕೆ ಕೊಡಲಿಯಿಂದ ಕೊಚ್ಚಿ ಸ್ನೇಹಿತನ ಬರ್ಬರ ಹತ್ಯೆ

ಬೆಳಗಾವಿ: ಸಾಲ ವಾಪಸ್ ನೀಡಲಿಲ್ಲ ಎಂದು ಸ್ನೇಹಿತನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೈಲಹೊಂಗಲ ತಾಲೂಕಿನ ಗಿರಿಯಾಲ್ ಗ್ರಾಮದಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಗಿರಿಯಾಲ್ ಗ್ರಾಮದಲ್ಲಿ ಸಾಲ ವಾಪಸ್ ನೀಡಿಲ್ಲವೆಂದು ಮಂಜುನಾಥ ಗೌಡರ(30) ಅವರನ್ನು ಕೊಲೆ ಮಾಡಲಾಗಿದೆ. ಕೊಡಲಿಯಿಂದ ಕೊಚ್ಚಿ ದಯಾನಂದ ಗುಂಡ್ಲೂರ ಸ್ನೇಹಿತನನ್ನೇ ಕೊಲೆ ಮಾಡಿದ್ದಾನೆ. ಕೃತ್ಯದ ಬಳಿಕ ಆರೋಪಿ ದಯಾನಂದ ಪೊಲೀಸರ ಮುಂದೆ ಶರಣಾಗಿದ್ದಾನೆ.

ಕಳೆದ ವಾರ ದಯಾನಂದನ ಬಳಿ 2,000 ರೂ. ಸಾಲ ಪಡೆದುಕೊಂಡಿದ್ದ ಮಂಜುನಾಥ ಒಂದು ವಾರದೊಳಗೆ ಹಣ ವಾಪಸ್ ನೀಡುವುದಾಗಿ ಹೇಳಿದ್ದ. ಅವಧಿ ಮುಗಿದ ಹಿನ್ನೆಲೆಯಲ್ಲಿ ಸಾಲ ಕೇಳಲು ದಯಾನಂದ ಮುಂದಾಗಿದ್ದ. ಈ ವಿಚಾರವಾಗಿ ನಿನ್ನೆ ರಾತ್ರಿ ಇಬ್ಬರ ನಡುವೆ ಜಗಳವಾಗಿದೆ. ಇದು ವಿಕೋಪಕ್ಕೆ ತಿರುಗಿ ಮಂಜುನಾಥನನ್ನು ದಯಾನಂದ ಕೊಲೆ ಮಾಡಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ ರಾತ್ರಿ ನಡೆದ ಜಗಳದ ಸಿಟ್ಟಿನಲ್ಲಿ ಬೆಳಗ್ಗೆ ಕೊಡಲಿಯಿಂದ ಹೊಡೆದು ಹತ್ಯೆ ಮಾಡಿದ್ದಾನೆ. ತೀವ್ರ ರಕ್ತಸ್ರಾವದಿಂದ ಆಸ್ಪತ್ರೆಗೆ ಸಾಗಿಸುವ ಮುನ್ನವೇ ಮಂಜುನಾಥ ಸಾವನ್ನಪ್ಪಿದ್ದಾನೆ. ಸ್ನೇಹಿತನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ. ಬೈಲಹೊಂಗಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular