HomeCrimeBREAKING: ಮದ್ಯದ ಅಮಲಿನಲ್ಲಿ ಚಾಕುವಿನಿಂದ ಇರಿದು ಸ್ನೇಹಿತನ ಕೊಲೆ

BREAKING: ಮದ್ಯದ ಅಮಲಿನಲ್ಲಿ ಚಾಕುವಿನಿಂದ ಇರಿದು ಸ್ನೇಹಿತನ ಕೊಲೆ

ರಾಮನಗರ: ಮದ್ಯದ ಅಮಲಿನಲ್ಲಿ ಚಾಕುವಿನಿಂದ ಇರಿದು ಸ್ನೇಹಿತನನ್ನು ಕೊಲೆ ಮಾಡಲಾಗಿದೆ. 28 ವರ್ಷದ ಭರತ್ ಕೊಲೆಯಾದ ಯುವಕ ಎಂದು ಹೇಳಲಾಗಿದೆ.

ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣದ ಶಾಹಿ ತಾಜ್ ಹೋಟೆಲ್ ಹಿಂಭಾಗ ಘಟನೆ ನಡೆದಿದೆ. ಚನ್ನಪಟ್ಟಣದ ಮಂಗಳವಾರ ಪೇಟೆ ನಿವಾಸಿ ಅಭಿಷೇಕ್ ಕೃತ್ಯ ಎಸಗಿದ್ದಾನೆ. ಬಾರ್ ವೊಂದರಲ್ಲಿ ಮದ್ಯ ಸೇವಿಸಿದ್ದ ಭರತ್, ಅಭಿಷೇಕ್, ಮಧು ಗಲಾಟೆ ಮಾಡಿಕೊಂಡಿದ್ದರು. ಮಾತಿಗೆ ಮಾತು ಬೆಳೆದು ಭರತ್ ನನ್ನು ಅಭಿಷೇಕ್ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಆರೋಪಿಗಳಾದ ಅಭಿಷೇಕ್ ಮತ್ತು ಮಧುನನ್ನು ಪೊಲೀಸರು ಬಂಧಿಸಿದ್ದಾರೆ. ಚನ್ನಪಟ್ಟಣ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular