BREAKING : ನಾಳೆ ಬೆಳಗ್ಗೆ 8:30 ರಿಂದ ಸಾರ್ವಜನಿಕರಿಗೆ ‘ಡಾ. ಮನಮೋಹನ್ ಸಿಂಗ್’ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ |ManMohan Singh

ನವದೆಹಲಿ : ನಾಳೆ ಬೆಳಗ್ಗೆ 8:30 ರಿಂದ ಸಾರ್ವಜನಿಕರಿಗೆ ಡಾ. ಮನಮೋಹನ್ ಸಿಂಗ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

ಬೆಳಗ್ಗೆ 8:30 ರಿಂದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ಡಾ. ಮನಮೋಹನ್ ಸಿಂಗ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಂತರ ಎಐಸಿಸಿ ಕಚೇರಿಯಿಂದ ಮನಮೋಹನ್ ಸಿಂಗ್ ಪಾರ್ಥಿವ ಶರೀರದ ಅಂತಿಮ ಯಾತ್ರೆ ಆರಂಭವಾಗಲಿದೆ. ನಂತರ ರಾಜ್’ಘಾಟ್ ನಲ್ಲಿ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಲಿದೆ.

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನರಾಗಿದ್ದು, ಅಗಲಿದ ನಾಯಕರಿಗೆ ಸಂತಾಪ ಸೂಚಿಸಲಾಗುತ್ತಿದೆ.ದೇಶಕ್ಕೆ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಕೊಡುಗೆ ಅಪಾರವಾಗಿದ್ದು, ಅವರ ಸಾಧನೆ, ದೇಶಕ್ಕೆ ಅವರ ಕೊಡುಗೆಯನ್ನು ಕೊಂಡಾಡಲಾಗುತ್ತಿದೆ.

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ನಿನ್ನೆ ರಾತ್ರಿ ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮನಮೋಹನ್ ಸಿಂಗ್ ಅವರು ಸೆಪ್ಟೆಂಬರ್ 26, 1932 ರಂದು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಗಾಹ್ ಗ್ರಾಮದಲ್ಲಿ ಜನಿಸಿದರು. ಅರ್ಥಶಾಸ್ತ್ರಜ್ಞರಲ್ಲದೆ, ಮನಮೋಹನ್ ಸಿಂಗ್ ಅವರು 1982-1985 ರವರೆಗೆ ಭಾರತೀಯ ರಿಸರ್ವ್ ಬ್ಯಾಂಕ್(RBI) ಗವರ್ನರ್ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read