ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಕೊಲೆಯಾದ 5 ವರ್ಷದ ಬಾಲಕಿಯ ಅಂತ್ಯಸಂಸ್ಕಾರ ಇಂದು ನೆರವೇರಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ದೇವಾಂಗಪೇಟೆಯ ರುದ್ರಭೂಮಿಯಲ್ಲಿ 5 ವರ್ಷದ ಬಾಲಕಿಯ ಅಂತ್ಯಸಂಸ್ಕಾರ ನೆರವೇರಿದ್ದು, ಪೋಷಕರು ಆಕ್ರಂದನ ಹೇಳತೀರದು. ಬಾಲಕಿಯ ಅಂತ್ಯಸಂಸ್ಕಾರದಲ್ಲಿ ನೆರೆದಿದ್ದ ಎಲ್ಲರ ಕಣ್ಣಲ್ಲೂ ನೀರು ಜಿನುಗುತ್ತಿತ್ತು. ಹೌದು, ಕಾಮುಕ ವ್ಯಾಘ್ರನ ಅಟ್ಟಹಾಸಕ್ಕೆ ಪುಟ್ಟ ಕಂದಮ್ಮ ಬಲಿಯಾಗಿದ್ದು, ಘಟನೆಗೆ ಇಡೀ ರಾಜ್ಯವೇ ಕಂಬನಿ ಮಿಡಿದಿದೆ. ಆದರೆ ಮಾಡಿದ್ದ ತಪ್ಪಿಗೆ ಆರೋಪಿ ಪೊಲೀಸರ ಎನ್ ಕೌಂಟರ್ ಗೆ ಬಲಿಯಾಗಿದ್ದಾನೆ.
5 ವರ್ಷದ ಬಾಲಕಿಯ ಅಪಹರಣ ಮತ್ತು ಕೊಲೆ ಪ್ರಕರಣದ ಆರೋಪಿಯನ್ನು ಕರ್ನಾಟಕದಲ್ಲಿ ನಡೆದ ಎನ್ಕೌಂಟರ್ನಲ್ಲಿ ಕೊಲ್ಲಲಾಗಿದೆ ಎಂದು ಕರ್ನಾಟಕ ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಬಿಹಾರ ಮೂಲದ 35 ವರ್ಷದ ರಿತೇಶ್ ಕುಮಾರ್ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ನಂತರ ಪೊಲೀಸ್ ಎನ್ಕೌಂಟರ್ನಲ್ಲಿ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.