HomeKarnatakaBREAKING : ನಾಳೆ ಬೆಂಗಳೂರಲ್ಲಿ ನಟ ದ್ವಾರಕೀಶ್ ಅಂತ್ಯಕ್ರಿಯೆ, ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ.!

BREAKING : ನಾಳೆ ಬೆಂಗಳೂರಲ್ಲಿ ನಟ ದ್ವಾರಕೀಶ್ ಅಂತ್ಯಕ್ರಿಯೆ, ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ.!

ಬೆಂಗಳೂರು : ನಾಳೆ ಬೆಳಗ್ಗೆ 11 :30 ಕ್ಕೆ ಬೆಂಗಳೂರಲ್ಲಿ ನಟ ದ್ವಾರಕೀಶ್ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ಮಾಹಿತಿ ನೀಡಿದೆ.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಾಳೆ ಬೆಳಗ್ಗೆ 7 ಗಂಟೆಯಿಂದ 11 ಗಂಟೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಬೆಳಗ್ಗೆ ಪಾರ್ಥಿವ ಶರೀರ ರವಾನೆ ಮಾಡಲಾಗುತ್ತದೆ. ಬೆಳಗ್ಗೆ 11 ಗಂಟೆವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನದ ನಂತರ ಚಾಮರಾಜಪೇಟೆ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ದ್ವಾರಕೀಶ್ ಪುತ್ರ ಯೋಗಿ ದ್ವಾರಕೀಶ್ ಮಾಹಿತಿ ನೀಡಿದ್ದಾರೆ.

ಸ್ಯಾಂಡಲ್ ವುಡ್ ‘ಪ್ರಚಂಡ ಕುಳ್ಳ’ ಎಂದೇ ಪ್ರಖ್ಯಾತಿ ಪಡೆದಿದ್ದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ (81) ನಿಧನರಾಗಿದ್ದಾರೆ.ದ್ವಾರಕೀಶ್ ನಿಧನಕ್ಕೆ ಚಿತ್ರರಂಗದ ಗಣ್ಯರು, ರಾಜಕೀಯ ಗಣ್ಯರು ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

1985ರಲ್ಲಿ ಸಿನಿಮಾ ನಿರ್ದೇಶನಕ್ಕಿಳಿದ ದ್ವಾರಕೀಶ್, ಮೊದಲ ಬಾರಿ ನೀ ಬರೆದ ಕಾದಂಬರಿ ಎಂಬ ಚಿತ್ರವನ್ನು ನಿರ್ದೇಶಿಸಿದರು. ಈ ಸಿನಿಮಾ ಸೂಪರ್ ಹಿಟ್ ಆಯಿತು. . ನಂತರ ಡಾನ್ಸ್ ರಾಜ ಡಾನ್ಸ, ಶ್ರುತಿ, ಶ್ರುತಿ ಹಾಕಿದ ಹೆಜ್ಜೆ, ರಾಯರು ಬಂದರು ಮಾವನ ಮನೆಗೆ ಸೇರಿದಂತೆ ಹಲವು ಚಿತ್ರಗಳಿಗೆ ಆಕ್ಷನ್ ಕಟ್ ಹೇಳಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular