HomeLatest NewsBREAKING: ಬೆಂಗಳೂರಲ್ಲಿ ಕಾರ್ ಗಳನ್ನು ಕದ್ದು ಹಳ್ಳಿಗಳಲ್ಲಿ ಮಾರಾಟ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್

BREAKING: ಬೆಂಗಳೂರಲ್ಲಿ ಕಾರ್ ಗಳನ್ನು ಕದ್ದು ಹಳ್ಳಿಗಳಲ್ಲಿ ಮಾರಾಟ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್

ಬೆಂಗಳೂರು: ಕಾರ್ ಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಗ್ಯಾಂಗ್ ಅನ್ನು ಬೆಂಗಳೂರಿನ ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಉಮೇಶ ತಬರೇಜ್, ಜಬೀರ್ ಖಾನ್ ಬಂಧಿತ ಆರೋಪಿಗಳು. ಬಂಧಿತರಿಂದ 12 ಲಕ್ಷ ರೂಪಾಯಿ ಮೌಲ್ಯದ ಆರು ಓಮ್ನಿ ಕಾರ್ ಗಳನ್ನು ಜಪ್ತಿ ಮಾಡಲಾಗಿದೆ. ಈ ಹಿಂದೆ ಆರೋಪಿಗಳು ಟ್ರ್ಯಾಕ್ಟರ್ ಗಳನ್ನು ಕದ್ದು ಮಾರಾಟ ಮಾಡುತ್ತಿದ್ದರು. 2020ರಲ್ಲಿ ಟ್ರಾಕ್ಟರ್ ಕಳ್ಳತನ ಕೇಸ್ ನಲ್ಲಿ ಬಂಧಿತರಾಗಿದ್ದರು.

ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟ್ರ್ಯಾಕ್ಟರ್ ಕಳ್ಳತನ ನಡೆದಿತ್ತು. ಟ್ರ್ಯಾಕ್ಟರ್ ಕಳ್ಳತನ ಕೇಸ್ ನಲ್ಲಿ ಜೈಲು ಸೇರಿದ್ದ ಆರೋಪಿಗಳು ಹೊರಗೆ ಬಂದಿದ್ದರು. ನಂತರ ಟ್ರ್ಯಾಕ್ಟರ್ ಗಳನ್ನು ಬಿಟ್ಟು ಓಮ್ನಿ ಕಾರ್ ಗಳನ್ನು ಕದಿಯುತ್ತಿದ್ದರು. ಬೆಂಗಳೂರಿನಲ್ಲಿ ಕಾರ್ ಗಳನ್ನು ಕದ್ದು ಹಳ್ಳಿಗಳಲ್ಲಿ ಮಾರಾಟ ಮಾಡುತ್ತಿದ್ದರು. ಮೇ ತಿಂಗಳಲ್ಲೇ ವಿದ್ಯಾರಣ್ಯಪುರದಲ್ಲಿ ಆರೋಪಿಗಳು ಕಾರ್ ಕದ್ದಿದ್ದರು. ಕಾರ್ ಕಳವು ಮಾಡುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ತನಿಖೆ ಕೈಗೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular