HomeIndiaBREAKING : ಜಾರ್ಖಂಡ್ ನಲ್ಲಿ ವಿದೇಶಿ ಮಹಿಳೆ ಮೇಲೆ 'ಗ್ಯಾಂಗ್ ರೇಪ್' , ಮೂವರು ಅರೆಸ್ಟ್..!

BREAKING : ಜಾರ್ಖಂಡ್ ನಲ್ಲಿ ವಿದೇಶಿ ಮಹಿಳೆ ಮೇಲೆ ‘ಗ್ಯಾಂಗ್ ರೇಪ್’ , ಮೂವರು ಅರೆಸ್ಟ್..!

ದುಮ್ಕಾ : ಸ್ಪೇನ್ ನ ಮಹಿಳಾ ಪ್ರವಾಸಿಯೊಬ್ಬರು ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಘಟನೆ ಜಾರ್ಖಂಡ್ ನ ದುಮ್ಕಾ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.

ಮುಂಜಾನೆ ಅಪರಿಚಿತ ಪುರುಷರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಸ್ಥಳೀಯ ವರದಿಗಳು ಬಹಿರಂಗಪಡಿಸಿವೆ. ಸ್ಥಳೀಯ ಪೊಲೀಸರು ಕ್ರಮ ಕೈಗೊಂಡು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆದಿದ್ದಾರೆ.

ಹನ್ಸ್ದಿಹಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪತಿಯೊಂದಿಗೆ ಬೈಕ್ ಪ್ರವಾಸದಲ್ಲಿದ್ದ ಸ್ಪ್ಯಾನಿಷ್ ಮಹಿಳೆ, ಮಧ್ಯರಾತ್ರಿಯ ಸುಮಾರಿಗೆ ಟೆಂಟ್ ನಲ್ಲಿ ಮಲಗಿದ್ದಾಗ ದುರುಳರು ಅತ್ಯಾಚಾರ ಎಸಗಿದ್ದಾರೆ.
ಯುವಕರು ಬಲವಂತವಾಗಿ ಅವಳು ಮಲಗಿದ್ದ ಟೆಂಟ್ ಪ್ರವೇಶಿಸಿ ಅವಳ ಮೇಲೆ ಅತ್ಯಾಚಾರ ಎಸಗಿದರು. ಲೈಂಗಿಕ ದೌರ್ಜನ್ಯದ ಜೊತೆಗೆ, ಅಪರಾಧಿಗಳು ಅವಳ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದರು. ನಂತರ ಮಹಿಳೆಯನ್ನು ವೈದ್ಯಕೀಯ ಚಿಕಿತ್ಸೆಗಾಗಿ ಸರೈಯಾಹತ್ ಸಮುದಾಯ ಆರೋಗ್ಯ ಕೇಂದ್ರಕ್ಕೆ (ಸಿಎಚ್ಸಿ) ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ವಶಕ್ಕೆ ತೆಗೆದುಕೊಂಡಿದ್ದು, ತನಿಖೆ ಮುಂದುವರೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular