HomeLatest NewsBREAKING: ಮಹಿಳಾ ಹೋಂ ಗಾರ್ಡ್ ಮೇಲೆ ಗ್ಯಾಂಗ್ ರೇಪ್: ತಡರಾತ್ರಿ ನಾಲ್ವರು ಆರೋಪಿಗಳು ಅರೆಸ್ಟ್

BREAKING: ಮಹಿಳಾ ಹೋಂ ಗಾರ್ಡ್ ಮೇಲೆ ಗ್ಯಾಂಗ್ ರೇಪ್: ತಡರಾತ್ರಿ ನಾಲ್ವರು ಆರೋಪಿಗಳು ಅರೆಸ್ಟ್

ಕೊಪ್ಪಳ: ಮಹಿಳಾ ಹೋಂ ಗಾರ್ಡ್ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲೆ ಯಲಬುರ್ಗಾ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ನಿನ್ನೆ ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯ ಮದ್ಲೂರು ಸಮೀಪ ಘಟನೆ ನಡೆದಿತ್ತು. ಪಾಳು ಬಿದ್ದ ಮನೆಯಲ್ಲಿ ಮದ್ಯ ಸೇವಿಸಿ ಕೀಚಕರು ಅತ್ಯಾಚಾರ ಎಸಗಿದ್ದರು. ಎಸ್ಪಿ ಡಾ. ರಾಮ್ ಎಲ್. ಅರಸಿದ್ದಿ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.

ಪರಿಚಯದವರಿಂದ ಹಣ ಪಡೆಯಲು ಹೊಸಪೇಟೆಯಿಂದ ಕುಷ್ಟಗಿ ಪಟ್ಟಣಕ್ಕೆ ಬಂದಿದ್ದ ಮಹಿಳೆಯನ್ನು ಸಂಜೆ ಬೈಕ್ ಮೇಲೆ ಕರೆದುಕೊಂಡು ಹೋಗಿದ್ದ ಆರೋಪಿಗಳು ಮದ್ಯ ಕುಡಿಸಿ ರೇಪ್ ಮಾಡಿರುವುದಾಗಿ ಆರೋಪಿಸಲಾಗಿದ್ದು, ಮಹಿಳೆಯನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular