ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶದಿಂದ ಅಕ್ರಮವಾಗಿ ಮಾದಕ ದ್ರವ್ಯಗಳನ್ನು ಸಾಗಿಸುತ್ತಿದ್ದ ಪ್ರಕರಣಗಳು ಮುಂದುವರಿದಿವೆ.
ಇತ್ತೀಚಿನ ವರದಿಗಳ ಪ್ರಕಾರ, ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕನೊಬ್ಬನ ಲಗೇಜ್‌ನಲ್ಲಿ ಅಕ್ರಮವಾಗಿ ಬಚ್ಚಿಟ್ಟಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕನನ್ನು ನಿಲ್ದಾಣದ ಟರ್ಮಿನಲ್‌ನಲ್ಲಿ ತಪಾಸಣೆ ನಡೆಸಿದಾಗ, ಆತನ ಬ್ಯಾಗ್‌ಗಳಲ್ಲಿ ಗುಟ್ಟಾಗಿ ಅಡಗಿಸಿಟ್ಟಿದ್ದ ಮಾದಕ ವಸ್ತು ಪತ್ತೆಯಾಗಿದೆ.ಅಧಿಕಾರಿಗಳು ಸುಮಾರು 2.33 ಕೋಟಿ ರೂಪಾಯಿ ಮೌಲ್ಯದ 6.6 ಕೆಜಿ ತೂಕದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.ಆರೋಪಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
ಕಳೆದ ಕೆಲವು ತಿಂಗಳುಗಳಿಂದ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಂತಹ ಅಕ್ರಮ ಸಾಗಾಟದ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಕಸ್ಟಮ್ಸ್ ಮತ್ತು ಭದ್ರತಾ ಸಿಬ್ಬಂದಿಗಳು ತಪಾಸಣೆಯನ್ನು ತೀವ್ರಗೊಳಿಸಿದ್ದಾರೆ.

