ಮೈಸೂರು: ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ತಗುಲಿದ್ದು, ಐದು ಜನ ಗಾಯಗೊಂಡಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಕುರ್ಜನ ಬೀದಿಯ ವಠಾರದಲ್ಲಿ ಘಟನೆ ನಡೆದಿದೆ.
ಮನೆಯಲ್ಲಿದ್ದ ಇಬ್ಬರು ಮತ್ತು ಸಹಾಯಕ್ಕೆ ಬಂದ ಮೂವರಿಗೆ ಸುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ನಿಂಗರಾಜು ಎಂಬುವವರ ಮನೆಯಲ್ಲಿ ಅವಘಡ ಸಂಭವಿಸಿದೆ. ಲಿಂಗರಾಜು ಪತ್ನಿ ಜ್ಯೋತಿ, ರಾಣಿಯಮ್ಮ, ಶೀಲಾ, ನಾಗಮ್ಮ ಎಂಬವರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಹುಣಸೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.